ಅಥಣಿ (ಬೆಳಗಾವಿ): ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಬೆಳಗಾವಿಯ ಅಥಣಿ ತಾಲೂಕಿನಲ್ಲಿ ಕುಟುಂಬವೊಂದು ಲಾಕ್ಡೌನ್ ಹಿನ್ನೆಲೆ ನೇಣಿಗೆ ಶರಣಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿತ್ತು. ಇದರಿಂದ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾನವ ಹಕ್ಕು ಸಂಘಟನೆಯ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ ಚಿಂಚಲಿ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ ಅವರಿಗೆ ಮನವಿ ಸಲ್ಲಿಸಿದರು.
ಲಾಕ್ಡೌನ್ನಿಂದ ಅಥಣಿಯಲ್ಲಿ ಬಡಕುಟುಂಬ ಆತ್ಮಹತ್ಯೆ ವದಂತಿ: ಸುಳ್ಳು ಸುದ್ದಿ ವಿರುದ್ಧ ಕ್ರಮಕ್ಕೆ ಆಗ್ರಹ - fake news on lockdown
ಬೆಳಗಾವಿ ಜಿಲ್ಲೆಯಲ್ಲಿ ಲಾಕ್ಡೌನ್ ಕಾರಣದಿಂದಾಗಿ ಬಡ ಕುಟುಂಬವೊಂದು ಮನನೊಂದು ಆತ್ನಹತ್ಯೆಗೆ ಶರಣಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈ ಸುದ್ದಿ ಸುಳ್ಳು ಎಂಬುದು ತಿಳಿದುಬಂದಿದೆ. ಹಾಗಾಗಿ ಈ ರೀತಿ ಸುದ್ದಿ ಹರಡಿ ಜನರ ದಾರಿ ತಪ್ಪಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಬೆಳಗಾವಿ ಮಾನವ ಹಕ್ಕುಗಳ ಸಂಘಟನೆ ತಹಶೀಲ್ದಾರರಲ್ಲಿ ಮನವಿ ಮಾಡಿದೆ.
ಲಾಕ್ಡೌನ್ನಿಂದ ಅಥಣಿಯಲ್ಲಿ ಬಡಕುಟುಂಬ ಆತ್ಮಹತ್ಯೆ ವದಂತಿ: ಸುಳ್ಳು ಸುದ್ದಿ ವಿರುದ್ಧ ಕ್ರಮಕ್ಕೆ ಆಗ್ರಹ
ಇದೇ ಸಂದರ್ಭದಲ್ಲಿ ಮಾತನಾಡಿದ ಸಾಮಾಜಿಕ ಹೋರಾಟಗಾರ ದೀಪಕ್ ಶಿಂಧೆ, ಲಾಕ್ಡೌನ್ ಬಗ್ಗೆ ಸಾರ್ವಜನಿಕರಲ್ಲಿ ವಿರೋಧ ಹುಟ್ಟುಹಾಕಲು ಮತ್ತು ಘನ ಸರ್ಕಾರದ ವೈಫಲ್ಯ ಎಂದು ಬಿಂಬಿಸಲು ಉದ್ದೇಶಪೂರ್ವಕವಾಗಿ ಸುದ್ದಿ ಹಬ್ಬಿಸಲಾಗಿದೆ. ಆದ್ದರಿಂದ ಅಥಣಿ ತಾಲೂಕು ಆಡಳಿತ, ಬೆಳಗಾವಿ ಜಿಲ್ಲಾಡಳಿತ ಇಂತಹ ಸುದ್ದಿ ಹಬ್ಬಿಸುವವರನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.