ಕರ್ನಾಟಕ

karnataka

ETV Bharat / state

ನಿವೃತ್ತರಾದ ಡಿಸಿ ಡಾ.ಬೊಮ್ಮನಹಳ್ಳಿ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ - ಬೆಳಗಾವಿ ಡಾ.ಬೊಮ್ಮನಹಳ್ಳಿ ಬೀಳ್ಕೊಡುಗೆ ಸುದ್ದಿ

ನಗರದ ಗಾಂಧಿ ಭವನದಲ್ಲಿ ಇಂದು ನಡೆದ ಬೀಳ್ಕೊಡುಗೆ ಹಾಗೂ ನೂತನ ಜಿಲ್ಲಾಧಿಕಾರಿ ಸ್ವಾಗತ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಬೊಮ್ಮನಹಳ್ಳಿ, ಎಂತಹುದ್ದೇ ಸಂದರ್ಭ ಬಂದರೂ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಮನಸ್ಸು ಮಾಡಿದರೆ ಯಶಸ್ವಿಯಾಗಿ ನಿಭಾಯಿಸಬಲ್ಲರು ಎಂಬುದಕ್ಕೆ ಕೊರೊನಾ ಮತ್ತು ಪ್ರವಾಹ ಪರಿಸ್ಥಿತಿಯೇ ಸಾಕ್ಷಿಯಾಗಿದೆ ಎಂದರು.

ನಿವೃತ್ತ ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ
ನಿವೃತ್ತ ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

By

Published : Jul 1, 2020, 11:18 AM IST

ಬೆಳಗಾವಿ:ಜಿಲ್ಲೆಯಲ್ಲಿ ಎಲ್ಲ ಅಧಿಕಾರಿಗಳ ಸಹಕಾರದೊಂದಿಗೆ ಪ್ರವಾಹ, ಕೊರೊನಾದಂತಹ ಕಠಿಣ ಪರಿಸ್ಥಿತಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸುವುದರ ಜೊತೆಗೆ ಉತ್ತಮ‌ ಆಡಳಿತ ನೀಡಲು ಸಾಧ್ಯವಾಗಿದೆ ಎಂದು ನಿವೃತ್ತ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಹೇಳಿದರು.

ನಗರದ ಗಾಂಧಿ ಭವನದಲ್ಲಿ ಇಂದು ನಡೆದ ಬೀಳ್ಕೊಡುಗೆ ಹಾಗೂ ನೂತನ ಜಿಲ್ಲಾಧಿಕಾರಿ ಸ್ವಾಗತ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಎಂತಹುದ್ದೇ ಸಂದರ್ಭ ಬಂದರೂ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಮನಸ್ಸು ಮಾಡಿದರೆ ಯಶಸ್ವಿಯಾಗಿ ನಿಭಾಯಿಸಬಲ್ಲರು ಎಂಬುದಕ್ಕೆ ಕೊರೊನಾ ಮತ್ತು ಪ್ರವಾಹ ಸ್ಥಿತಿ ಸಾಕ್ಷಿಯಾಗಿದೆ ಎಂದರು.

ಇನ್ನು ರಾಜ್ಯದ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಕೆಲಸ ಮಾಡುವ ಅಪರೂಪದ ಅವಕಾಶಗಳು ಎಲ್ಲರಿಗೂ ಸಿಗುವುದಿಲ್ಲ.ಇಂತಹ ಅವಕಾಶ ಮೂವರು ಮುಖ್ಯಮಂತ್ರಿಗಳು ಒದಗಿಸಿದ್ದಾರೆ. ಮುಖ್ಯಮಂತ್ರಿಗಳು, ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲೆಯ ಜನರ ಪ್ರೀತಿ-ವಿಶ್ವಾಸಕ್ಕೆ ನಾನು ಚಿರ ಋಣಿಯಾಗಿದ್ದೇನೆ. ಕೊನೆಯ ಉಸಿರು ಇರುವವರೆಗೂ ಎಲ್ಲರ ಈ ಪ್ರೀತಿ ವಿಶ್ವಾಸ ನನಗೆ ಸ್ಫೂರ್ತಿಯಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ ನೂತನ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾತನಾಡಿ, ನಿವೃತ್ತ ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರೊಂದಿಗಿನ‌ ಒಡನಾಟ ಮತ್ತು ಅವರ ಸೇವಾನುಭವವನ್ನು ಸ್ಮರಿಸಿದರು. ಬೆಳಗಾವಿ ನನ್ನ ಜಿಲ್ಲೆ. ನನ್ನ ಊರಿನಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುವ ಸದವಕಾಶ ನನಗೆ ಲಭಿಸಿದೆ. ಇದನ್ನು ಸದುಪಯೋಗ ಮಾಡಿಕೊಂಡು ಜಿಲ್ಲೆಗೆ ಕೀರ್ತಿ ತರುತ್ತೇನೆ ಎಂದರು.

ಜಿಲ್ಲಾ ಪಂಚಾಯತ ಸಿಇಒ ಡಾ.ರಾಜೇಂದ್ರ ಕೆ.ವಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಶಿಧರ್ ಕುರೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮತ್ತಿತರರು ಉಪಸ್ಥಿತರಿದ್ದರು.

ABOUT THE AUTHOR

...view details