ಚಿಕ್ಕೋಡಿ:ಸಾಲಬಾಧೆ ತಾಳದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕೋಡಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ... - Farmer suicide news chikkodi
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಶಿವಪ್ಪ ಅಪ್ಪಾಸಾಹೇಬ್ ದೇಸಾಯಿ ಎಂಬ ರೈತ ಸಾಲಬಾಧೆ ತಾಳದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ರೈತ
ಮೇಖಳಿ ಗ್ರಾಮದ ಶಿವಪ್ಪ ಅಪ್ಪಾಸಾಹೇಬ್ ದೇಸಾಯಿ(45) ಮೃತ ರೈತ. ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಹಾಗೂ ಕೈ ಸಾಲ ಹೀಗೆ ಒಟ್ಟು 13 ಲಕ್ಷ ಸಾಲ ಹೊಂದಿದ್ದು, ಸಾಲಭಾದೆ ತಾಳಲಾರದೆ ತನ್ನ ಸ್ವಂತ ಜಮೀನಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಈ ಘಟನೆ ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.