ಬೆಳಗಾವಿ: ಸಾಲಬಾಧೆ ತಾಳಲಾರದೆ ರೈತನೋರ್ವ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದಲ್ಲಿ ನಡೆದಿದೆ.
ಸಾಲಬಾಧೆ: ಬೆಳಗಾವಿಯಲ್ಲಿ ರೈತ ಆತ್ಮಹತ್ಯೆಗೆ ಶರಣು - undefined
ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದಲ್ಲಿ ಪ್ರಕರಣ ನಡೆದಿದೆ.
ಆತ್ಮಹತ್ಯೆಗೆ ಶರಣಾದ ರೈತ
ಮನೆ ನಿರ್ವಹಣೆ, ಕೃಷಿ ಚಟುವಟಿಕೆಗೆ ಸಾಲ ಮಾಡಿದ್ದ ಅಮ್ಮಣಗಿ ಗ್ರಾಮದ ರೈತ ಭೀಮಪ್ಪ ಅಪ್ಪಣ್ಣ ಖಾನಾಪುರಿ (48) ಆತ್ಮಹತ್ಯೆಗೆ ಶರಣಾದವರು. ಭೀಮಪ್ಪ ವಿವಿಧ ಬ್ಯಾಂಕ್ ಗಳಲ್ಲಿ ಸುಮಾರು 2,46,750 ಸಾಲ ಮಾಡಿಕೊಂಡಿದ್ದ. ಈ ಸಾಲ ತೀರಿಸುವುದು ಹೇಗೆ ಎಂಬ ಚಿಂತೆಯಲ್ಲಿ ದನಗಳ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತ ರೈತನ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.
ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Jul 23, 2019, 2:50 PM IST