ಬೆಳಗಾವಿ: ಕರ್ನಾಟಕ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಿಂಪಡೆಯುವಂತೆ ಆಗ್ರಹಿಸಿ ಸಚಿವ ರಮೇಶ್ ಜಾರಕಿಹೊಳಿ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದ ರೈತರನ್ನು ಪೊಲೀಸರು ತಡೆದಿರುವ ಘಟನೆ ಗೋಕಾಕ್ನಲ್ಲಿ ನಡೆದಿದೆ.
ಸಚಿವ ರಮೇಶ್ ಜಾರಕಿಹೊಳಿ ಮನೆಗೆ ಮುತ್ತಿಗೆ ಹಾಕಲು ಯತ್ನ: ರೈತರನ್ನು ತಡೆದ ಪೊಲೀಸರು - Ramesh Jarakiholi
ಕರ್ನಾಟಕ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಿಂಪಡೆಯುವಂತೆ ಆಗ್ರಹಿಸಿ ಸಚಿವ ರಮೇಶ್ ಜಾರಕಿಹೊಳಿ ಮನೆಗೆ ಮುತ್ತಿಗೆ ಹಾಕಲು ರೈತರು ಯತ್ನಿಸಿದ್ದು, ಪೊಲೀಸರು ತಡೆದಿರುವ ಘಟನೆ ಗೋಕಾಕ್ನಲ್ಲಿ ನಡೆದಿದೆ.

ಮುತ್ತಿಗೆ ಹಾಕಲು ಯತ್ನಿಸಿದ ರೈತರು
ಮುತ್ತಿಗೆ ಹಾಕಲು ಯತ್ನಿಸಿದ ರೈತರು
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಗೋಕಾಕಿನಲ್ಲಿರುವ ಸಚಿವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಪ್ರತಿಭಟನಾನಿರತ ರೈತರನ್ನು ಪೊಲೀಸರು ಬಸವೇಶ್ವರ ವೃತ್ತದಲ್ಲಿ ತಡೆದರು.
ಪ್ರತಿಭಟನೆಯಲ್ಲಿ ಗೋಕಾಕ್, ಮೂಡಲಗಿ ತಾಲೂಕಿನ ನೂರಾರು ರೈತರು ಭಾಗಿಯಾಗಿದ್ದಾರೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ಕೈ ಬಿಡುವಂತೆ ರೈತರು ಒತ್ತಾಯಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಗೋಕಾಕ್ ಪೊಲೀಸರು ಹರಸಾಹಸಪಟ್ಟರು. ಕೆಲ ರೈತರು ಅರೆಬೆತ್ತಲೆಯಾಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.