ಬೆಳಗಾವಿ:ಸೂಕ್ತ ಬೆಲೆ ಸಿಗದಿದ್ದಕ್ಕೆ ನೋಂದ ಹೂವು ಬೆಳೆಗಾರ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ನಡೆದಿದೆ.
ಸೂಕ್ತ ಬೆಲೆ ಸಿಗದಿದ್ದಕ್ಕೆ ನೊಂದ ಹೂವು ಬೆಳೆಗಾರ: ಆತ್ಮಹತ್ಯೆಗೆ ಶರಣಾದ ಅನ್ನದಾತ! - ಬೆಳಗಾವಿ ಸುದ್ದಿ
ಸಾಲ ಮಾಡಿ ಅರ್ಧ ಎಕರೆ ಜಮೀನಿನಲ್ಲಿ ವಿವಿಧ ಬಗೆಯ ಹೂವುಗಳನ್ನು ಬೆಳೆದಿದ್ದ ರೈತನೋರ್ವ ಸರಿಯಾದ ಬೆಲೆ ಸಿಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ಶರಣಾದ ಅನ್ನದಾತ
ಮಾರುತಿ ಬೆಳಗೂಚೆ (63) ಆತ್ಮಹತ್ಯೆಗೆ ಶರಣಾದ ರೈತ. ಸಾಲ ಮಾಡಿ ಅರ್ಧ ಎಕರೆ ಜಮೀನಿನಲ್ಲಿ ವಿವಿಧ ಬಗೆಯ ಹೂವುಗಳನ್ನು ಬೆಳೆದಿದ್ದರು. ಉತ್ತಮ ಫಸಲು ಬಂದರೂ ಹೂವಿಗೆ ಸೂಕ್ತ ಬೆಲೆ ಸಿಕ್ಕಿಲ್ಲವೆಂದು ನೊಂದ ರೈತ ಜಮೀನಿನಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.