ಬೆಳಗಾವಿ/ಚಿಕ್ಕೋಡಿ:ನೆರೆ ಸಂತ್ರಸ್ತರಿಗೆ ಹಾಗೂ ಬೆಳೆ ಹಾನಿಗೊಳಗಾದ ರೈತರಿಗೆ ಶೀಘ್ರ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚಂದ್ರಶೇಖರ ಕೋಡಿಹಳ್ಳಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
ರಾಜ್ಯದ ಜಲಾಶಯಗಳ ನಿರ್ವಹಣೆಯ ಹೊಣೆ ಹೊತ್ತ ಸಿಬ್ಬಂದಿ ಹಾಗೂ ಮಹಾರಾಷ್ಟ್ರದ ಬೇಜವಾಬ್ದಾರಿ ನಿರ್ವಹಣೆಯಿಂದ ಅನೇಕ ಗ್ರಾಮಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗುವ ಸಂದರ್ಭ ಉಂಟಾಗಿದೆ. ಇದರಿಂದ ಜನ ಜೀವನದ ಅಪಾರ ಹಾನಿಯ ಉಂಟಾಗಿದೆ. ನಷ್ಟದ ಹೊಣೆಯನ್ನು ಮಹಾರಾಷ್ಟ ಹೊತ್ತು ಶೀಘ್ರವೇ ಪರಿಹಾರ ನೀಡಬೇಕು. ಕೇಂದ್ರ ಇದರಲ್ಲಿ ಮಧ್ಯ ಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದ್ರು.