ಅಥಣಿ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಅಥಣಿ ತಾಲೂಕಿನ ರೈತರು ಆಗ್ರಹಿಸಿದ್ದಾರೆ.
ತೋಟಗಾರಿಕೆ ಬೆಳೆಗೂ ವಿಶೇಷ ಪ್ಯಾಕೇಜ್ ನೀಡುವಂತೆ ರೈತರ ಆಗ್ರಹ - Athani latest news
ಲಾಕ್ಡೌನ್ ಹಿನ್ನೆಲೆಯಲ್ಲಿ ತೋಟಗಾರಿಕೆ ಬೆಳೆಗಳಿಗೆ ಬಾರಿ ನಷ್ಟ ಸಂಭವಿಸಿದ್ದರಿಂದ, ಹೂ ಬೆಳೆಗಾರರಿಗೆ ಘೋಷಣೆ ಮಾಡಿರುವ ವಿಶೇಷ ಪ್ಯಾಕೇಜ್ ನಂತೆ ತೋಟಗಾರಿಕೆ ಬೆಳೆ ಬೆಳೆದ ರೈತರಿಗೂ ಮುಖ್ಯಮಂತ್ರಿಗಳು ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ರೈತರು ಆಗ್ರಹಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲವಾರು ರೈತರು ತೋಟಗಾರಿಕೆ ಬೆಳೆಯಾದ, ಕಲ್ಲಂಗಡಿ, ಪಪ್ಪಾಯ, ದಾಳಿಂಬೆ, ದ್ರಾಕ್ಷಿ, ಮಾವು ಬೆಳೆಯನ್ನ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದಾರೆ. ಆದರೆ, ಲಾಕ್ಡೌನ್ ಆದೇಶದ ಪರಿಣಾಮವಾಗಿ ವ್ಯಾಪಾರ ವಹಿವಾಟು ಇಲ್ಲದೇ ರೈತರು ಸಂಕಷ್ಟದಲ್ಲಿದ್ದಾರೆ.
ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಹೂ ಬೆಳೆಗಾರರಿಗೆ, ಘೋಷಣೆ ಮಾಡಿರುವ ವಿಶೇಷ ಪ್ಯಾಕೇಜ್ ನಂತೆ ತೋಟಗಾರಿಕೆ ಬೆಳೆಗಳಿಗೆ ಹಣ ಬಿಡುಗಡೆ ಮಾಡಬೇಕು, ಪ್ರತಿ ಎಕರೆಗೆ ಒಂದು ಲಕ್ಷ ಪರಿಹಾರ ಘೋಷಣೆ ಮಾಡಬೇಕೆಂದು ಅಥಣಿ ತಾಲೂಕಿನ ರೈತರು ಮಾಧ್ಯಮಗಳ ಮೂಲಕ ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ.