ಬೆಳಗಾವಿ : ಪ್ರವಾಹ ಪೀಡಿತ ಪ್ರದೇಶಗಳ ರೈತರಿಗೆ ಪರಿಹಾರ ನೀಡಬೇಕು. ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ರೈತರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದಾರೆ.
ನೆರೆ ಪರಿಹಾರಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರಿಂದ ಅಹೋರಾತ್ರಿ ಧರಣಿ - Belagavi farmers protest
ಪ್ರವಾಹ ಪೀಡಿತ ಪ್ರದೇಶಗಳ ರೈತರಿಗೆ ಪರಿಹಾರ ನೀಡಬೇಕು. ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದಾರೆ.
ಧರಣಿ ಸತ್ಯಾಗ್ರಹ
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನುರಾರು ರೈತರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ರೈತ ಮಹಿಳೆಯರೂ ಪಾಲ್ಗೊಂಡಿದ್ದಾರೆ. ಪ್ರವಾಹಪೀಡಿತ ಪ್ರದೇಶಗಳ ನಿರಾಶ್ರಿತರಿಗೆ ಸೂಕ್ತ ಪರಿಹಾರ ನೀಡಬೇಕು. ಕರ್ನಾಟಕದ ಹಲವು ಭಾಗಗಳಲ್ಲಿ ಉಂಟಾದ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ಕೇಂದ್ರ ಸರ್ಕಾರ ತಕ್ಷಣ ಪರಿಹಾರ ನೀಡಬೇಕು. ಜೊತೆಗೆ ಎನ್ಡಿಆರ್ಎಫ್ನಲ್ಲಿರುವ ದೋಷಗಳನ್ನು ಸರಿಪಡಿಸಿ ರೈತರ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
ತಮಗೆ ನ್ಯಾಯ ಸಿಗುವವರೆಗೂ ಇಲ್ಲಿಂದ ಹೋಗುವ ಪ್ರಶ್ನೆ ಇಲ್ಲ ಎಂದು ಪಟ್ಟು ಹಿಡಿದಿದ್ದಾರೆ.