ಅಥಣಿ:ಕೃಷ್ಣಾ ನದಿ ಪ್ರವಾಹಕ್ಕೆ ಒಳಗಾದ ತಾಲೂಕಿನ 15 ಗ್ರಾಮಗಳ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ಬಂದ ರೈತರನ್ನು ಮಾರ್ಗ ಮಧ್ಯೆಯೇ ಪೊಲೀಸರು ತಡೆದರು.
ಜೂನ್ 18ರಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಬೇಕು. ಅನುಮತಿ ನೀಡುವಂತೆ ಈ ಮೊದಲೇ ಅಥಣಿ ಠಾಣೆ ಪೊಲೀಸರು ಮತ್ತು ಜಿಲ್ಲಾಧಿಕಾರಿಗಳನ್ನು ಕೇಳಿಕೊಂಡಿದ್ದರೂ ಅವಕಾಶ ನೀಡಿರಲಿಲ್ಲ. ಇಂದು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಲು ಹೋಗುತ್ತಿದ್ದೇವೆ. ಆದರೆ, ನಮ್ಮನ್ನು ಹಲ್ಯಾಳ ಗ್ರಾಮದಲ್ಲಿ ಪೊಲೀಸರು ತಡೆದಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.