ಬೆಳಗಾವಿ :ಭೂಸುಧಾರಣಾ ಕಾಯ್ದೆ ತಿದ್ದುಪಡಿ ಕ್ರಮ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಬೆಳಗಾವಿ ರೈತರು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಕಿತ್ತೂರು ತಾಲೂಕಿನ ದಾಸ್ತಿಕೊಪ್ಪ ಗ್ರಾಮದ ಸಮೀಪ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ರೈತ ಮುಖಂಡರ ಆಕ್ರೋಶ ವ್ಯಕ್ತಪಡಿಸಿದರು. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಿಂಪಡೆಯುವಂತೆ ಆಗ್ರಹಿಸಿದರು.
ರೈತರ ಪ್ರತಿಭಟನೆಯಿಂದ ಹೆದ್ದಾರಿ ಮೇಲೆ ಕಿ.ಮೀ. ಗಟ್ಟಲೇ ವಾಹನಗಳು ಸಾಲಾಗಿ ನಿಂತಿದ್ದರಿಂದ ಪ್ರಯಾಣಿಕರು ಹೈರಾಣಾದರು. ಇದಕ್ಕೂ ಮೊದಲು ಇತ್ತೀಚೆಗೆ ನಿಧನರಾದ ರೈತ ಮುಖಂಡ ಚಂದ್ರಗೌಡ ಪಾಟೀಲ ಅವರ ಚಿತ್ರವನ್ನು ಹೆದ್ದಾರಿ ಮೇಲಿಟ್ಟು ಶ್ರದ್ಧಾಂಜಲಿ ಸಲ್ಲಿಸಿದರು.
ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರ ಪ್ರತಿಭಟನೆ ಪ್ರತಿಭಟನಾಕಾರರ ಮನವೊಲಿಸುವಲ್ಲಿ ಕಿತ್ತೂರು ಸಿಪಿಐ ಸುಸ್ತಾದರು. ಒಂದು ಗಂಟೆ ಪ್ರತಿಭಟನೆ ನಡೆಸಿದ ಬಳಿಕ ರೈತ ಮುಖಂಡರು ಸಿಪಿಐ ಮೂಲಕವೇ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕಾಯ್ದೆ ತಿದ್ದುಪಡಿ ಹಿಂಪಡೆಯುವಂತೆ ಆಗ್ರಹಿಸಿ ಜಿಲ್ಲೆಯ ರಾಯಭಾಗ, ಹಾರೂಗೇರಿಯಲ್ಲೂ ರೈತರು ಪ್ರತಿಭಟಿಸಿದರು.