ಚಿಕ್ಕೋಡಿ : ಸಮರ್ಪಕ ಕುಡಿವ ನೀರು ಪೂರೈಕೆ ಮಾಡುವಂತೆ ಒತ್ತಾಯಿಸಿ ಕಾಗವಾಡ ತಾಲೂಕಿನ ಉಗಾರ ಬುದ್ರುಕ ಗ್ರಾಮದ ರೈತರು ಮೀರಜ್ - ಜಮಖಂಡಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ನೀರಿಗಾಗಿ ಹೆದ್ದಾರಿ ತಡೆದ ರೈತರು: ಸರ್ಕಾರದ ವಿರುದ್ಧ ಆಕ್ರೋಶ
ಕುಡಿಯುವ ನೀರು ಪೂರೈಕೆ ಮಾಡುವಂತೆ ಒತ್ತಾಯಿಸಿ ನೂರಾರು ರೈತರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಹೆದ್ದಾರಿ ತಡೆದಿದ್ದರಿಂದ ಪ್ರಯಾಣಿಕರು ಸುಮಾರು ಎರಡು ಗಂಟೆಗಳ ಕಾಲ ಪರದಾಡಬೇಕಾಯಿತು.
ಸುಡು ಬಿಸಿಲಿನಲ್ಲಿ ನಿತ್ಯ ನಾಲ್ಕೈದು ಕಿ.ಮೀ ದೂರ ಹೋಗಿ ನೀರು ತರಬೇಕು. ಈ ರೀತಿ ನೀರು ತರುತ್ತಿರುವ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ಬಗ್ಗೆ ಗೊತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಈ ಕಡೆ ಗಮನ ಹರಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಹೆದ್ದಾರಿ ತಡೆದಿದ್ದರಿಂದ ಪ್ರಯಾಣಿಕರು ಪರದಾಡಬೇಕಾಯಿತು.
ಮನವಿ ಸ್ವೀಕರಿಸಿ ಮಾತನಾಡಿದ ಉಪ ತಹಶೀಲ್ದಾರ್ ಚೌಗಲಾ, ನೀರು ಬಿಡುವ ಬಗ್ಗೆ ಉನ್ನತ ಮಟ್ಟದಲ್ಲಿ ಮಾತುಕತೆ ಮುಗಿದಿದೆ. ಸದ್ಯದಲ್ಲೇ ನೀರು ಬಿಡಲಾಗುವುದು ಎಂದು ಮೇಲಧಿಕಾರಿಗಳು ತಿಳಿಸಿದ್ದಾರೆ ಎಂದು ಹೇಳಿದಾಗ ರೈತರು ಪ್ರತಿಭಟನೆ ಹಿಂದಕ್ಕೆ ಪಡೆದುಕೊಂಡರು.