ಬೆಳಗಾವಿ: ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಮಸೂದೆ ಹಿಂಪಡೆಯುವಂತೆ ಆಗ್ರಹಿಸಿ ಸಾಂಬ್ರಾ ವಿಮಾನ ನಿಲ್ದಾಣದ ಮುಖ್ಯದ್ವಾರದ ಎದುರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಸಾಂಬ್ರಾ ವಿಮಾನ ನಿಲ್ದಾಣದ ಮುಖ್ಯದ್ವಾರದೆದುರು ರೈತರ ಪ್ರತಿಭಟನೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಭೂಸ್ವಾಧೀನ ಕಾಯ್ದೆ ಹಿಂಪಡೆಯುವಂತೆ ರೈತರು ಸಿಎಂಗೆ ಮನವಿ ಸಲ್ಲಿಸಲು ನಿರ್ಧರಿಸಿದ್ದರು. ಆದರೆ, ಪೊಲೀಸರು ರೈತ ಮುಖಂಡರಿಗೆ ಅನುಮತಿ ನಿರಾಕರಿಸಿದರು. ಹೀಗಾಗಿ ವಿಮಾನ ನಿಲ್ದಾಣದ ಮುಖ್ಯದ್ವಾರದ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇಬ್ಬರಿಗೆ ಅನುಮತಿ:ಇಂದು ನೆರೆಪೀಡಿತ ಪ್ರದೇಶಗಳಲ್ಲಿ ಸಿಎಂ ಬಿಎಸ್‌ವೈ ವೈಮಾನಿಕ ಸಮೀಕ್ಷೆಗಾಗಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಸಿಎಂ ಭೇಟಿಯಾಗಿ ಮನವಿ ಸಲ್ಲಿಸಲು ಹಲವು ಸಂಘಟನೆಗಳ ಸದಸ್ಯರು ನಿರ್ಧರಿಸಿದ್ದಾರೆ.
ಕಳೆದ ಬಾರಿ ಪ್ರವಾಹದಲ್ಲಿ ಉಂಟಾದ ನಷ್ಟದ ಪರಿಹಾರವೇ ಇನ್ನೂ ತಲುಪಿಲ್ಲ ಎಂಬ ಆರೋಪದ ಹಿನ್ನೆಲೆ ರಾಜ್ಯ ರೈತ ಸಂಘ, ಹಸಿರು ಸೇನೆ, ವಿವಿಧ ಕನ್ನಡಪರ ಸಂಘಟನೆಗಳಿಂದ ಮನವಿ ಸಲ್ಲಿಕೆಗೆ ನಿರ್ಧರಿಸಿದ್ದರು. ಹೀಗಾಗಿ ಸಿಎಂಗೆ ಮನವಿ ಸಲ್ಲಿಸಲು ಒಂದು ಸಂಘಟನೆಯಿಂದ ಇಬ್ಬರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.