ಬೆಳಗಾವಿ:ಬ್ಯಾಂಕ್ಗಳ ವರ್ತನೆ ಖಂಡಿಸಿ ರೈತರು ಜಿಲ್ಲೆಯ ಲೀಡ್ ಬ್ಯಾಂಕಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಬೆಳಗಾವಿಯಲ್ಲಿ ಲೀಡ್ ಬ್ಯಾಂಕ್ ಮುತ್ತಿಗೆ ಹಾಕಿ ರೈತರ ಪ್ರತಿಭಟನೆ - Farmers protest belagavi
ಬ್ಯಾಂಕ್ಗಳ ವರ್ತನೆ ಖಂಡಿಸಿ ರೈತರು ಜಿಲ್ಲೆಯ ಲೀಡ್ ಬ್ಯಾಂಕಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ರೈತರ ಪ್ರತಿಭಟನೆ
ಪ್ರವಾಹದಿಂದ ತತ್ತರಿಸಿರುವ ರೈತರ ಜೊತೆಗೆ ಜಿಲ್ಲೆಯ ಬ್ಯಾಂಕ್ಗಳು ಇನ್ನೂ ಚೆಲ್ಲಾಟವಾಡುತ್ತಿದ್ದು, ಪ್ರಧಾನ ಮಂತ್ರಿ ಸನ್ಮಾನ್ ಯೋಜನೆಯಡಿ ಬಿಡುಗಡೆ ಆಗಿರುವ ಎರಡನೇ ಕಂತಿನ ಎರಡು ಸಾವಿರ ಹಣವನ್ನು ಬ್ಯಾಂಕ್ಗಳು ಸಾಲದ ಖಾತೆಗೆ ಜಮಾ ಮಾಡಿಕೊಳ್ಳುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಪ್ರೋತ್ಸಾಹದ ಹಣವನ್ನು ಸಾಲದ ಖಾತೆಗೆ ಜಮಾ ಮಾಡಿಕೊಳ್ಳುತ್ತಿರುವ ಬ್ಯಾಂಕ್ ವಿರುದ್ಧ ರೈತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಜಿಲ್ಲೆಯ ಲೀಡ್ ಬ್ಯಾಂಕ್ ಮ್ಯಾನೇಜರ್ಗೆ ಮನವಿ ಸಲ್ಲಿಸಿ ಕ್ರಮ ಜರುಗಿಸುವಂತೆ ಆಗ್ರಹಿಸಿದರು.