ಬೆಳಗಾವಿ:ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ನಗರದ ಜಿಲ್ಲಾಧಿಕಾರಿ ಆವರಣದಲ್ಲಿ ಕರ್ನಾಟಕ ರೈತ ಸಂಘದ ಮುಖಂಡರಿಂದ ಪ್ರತಿಭಟನೆ ನಡೆಸಲಾಯಿತು.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಮಳೆ ನಡುವೆಯೂ ರೈತ ಸಂಘದ ಮುಖಂಡರಿಂದ ಪ್ರತಿಭಟನೆ - ಬೆಳಗಾವಿಯಲ್ಲಿ ಪ್ರತಿಭಟನೆ
ಧಾರಾಕಾರ ಮಳೆಯ ಮಧ್ಯೆಯೂ ರೈತ ಸಂಘದ ಮುಖಂಡರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣಾ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಧಾರಾಕಾರ ಮಳೆಯ ಮಧ್ಯೆಯೂ ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣಾ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು. ಪ್ರತಿಭಟನೆ ಹಿನ್ನೆಲೆ ಡಿಸಿ ಕಚೇರಿ ಆವರಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಹಾಕಿ ರೈತರನ್ನು ತಡೆಯಲಾಗಿತ್ತು. ಈ ವೇಳೆ ಆಕ್ರೋಶಗೊಂಡ ರೈತರು ಪೊಲೀಸ್ ಬ್ಯಾರಿಕೇಡ್ಗಳನ್ನು ತೆಗೆದು ಹಾಕಿ ಪೊಲೀಸರನ್ನು ನೂಕಿಕೊಂಡು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆಗೆ ಯತ್ನಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆಯ ನಡುವೆಯೂ ಧರಣಿ ಮುಂದುವರೆಸಿದರು.
ಈ ವೇಳೆ ಸ್ಥಳಕ್ಕೆ ಆಗಮಿಸಿದ ಪಿಎಸ್ಐ, ಎಸಿಪಿ ಸೇರಿದಂತೆ ಪೊಲೀಸರು ಎಷ್ಟೇ ಮನವಿ ಮಾಡಿಕೊಂಡರು ಜಗ್ಗದ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ. ನಂತರ ಉಪ ವಿಭಾಗಾಧಿಕಾರಿ ಅಶೋಕ ತೇಲಿ ಮನವಿ ಸ್ವೀಕರಿಸಿದರು.