ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜವನ್ನು 2ಎಗೆ ಸೇರಿಸುವಂತೆ ಆಗ್ರಹಿಸಿ ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜ ಸ್ವಾಮೀಜಿ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ಸೌಧದ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಲಾಗಿದೆ.
ಪಂಚಮಸಾಲಿ ಸಮಾಜಕ್ಕೆ ಮೀಸಲಾತಿಗೆ ಆಗ್ರಹ: ಸುವರ್ಣ ಸೌಧದ ಎದುರು ಉಪವಾಸ ಸತ್ಯಾಗ್ರಹ - Fasting in Belgavi
ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಸುವರ್ಣ ಸೌಧದ ಎದುರು ಕೂಡಲಸಂಗಮ ಸ್ವಾಮೀಜಿ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ. ಬಸವಣ್ಣನ ನಾಮ ಸ್ಮರಣೆ ಮೂಲಕ ಜಯಮೃತ್ಯುಂಜಯ ಸ್ವಾಮೀಜಿ ಉಪವಾಸ ಸತ್ಯಾಗ್ರಹ ಆರಂಭಿಸಿದರು.
![ಪಂಚಮಸಾಲಿ ಸಮಾಜಕ್ಕೆ ಮೀಸಲಾತಿಗೆ ಆಗ್ರಹ: ಸುವರ್ಣ ಸೌಧದ ಎದುರು ಉಪವಾಸ ಸತ್ಯಾಗ್ರಹ Fasting led by Kudalasangama Swamiji](https://etvbharatimages.akamaized.net/etvbharat/prod-images/768-512-9338063-207-9338063-1603861442440.jpg)
ಬಸವಣ್ಣನ ನಾಮ ಸ್ಮರಣೆ ಮೂಲಕ ಜಯಮೃತ್ಯುಂಜಯ ಸ್ವಾಮೀಜಿ ಉಪವಾಸ ಸತ್ಯಾಗ್ರಹ ಆರಂಭಿಸಿದರು. ಪಂಚಮಸಾಲಿ ಸಮಾಜವನ್ನು 2ಎಗೆ ಸೇರಿಸುವಂತೆ ಆಗ್ರಹಿಸಿ ನಡೆಯುತ್ತಿರುವ ರಾಜ್ಯಮಟ್ಟದ ಉಪವಾಸ ಸತ್ಯಾಗ್ರಹ ಇದಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಪಂಚಮಸಾಲಿ ಸಮಾಜದವರು ಭಾಗಿಯಾಗಿದ್ದಾರೆ. ಉಪವಾಸ ಸತ್ಯಾಗ್ರಹದಲ್ಲಿ ಬಸವಣ್ಣನ ನಾಮ ಸ್ಮರಣೆ, ಬಸವಣ್ಣನ ವಚನಗಳ ಪಠಣ ಮಾಡಲಾಯಿತು.
ಉಪವಾಸ ಸತ್ಯಾಗ್ರಹ ಆರಂಭಕ್ಕೂ ಮುನ್ನ ಮಾತನಾಡಿದ ಜಯಮೃತ್ಯುಂಜಯ ಸ್ವಾಮೀಜಿ, ಕೃಷಿ ಪ್ರಧಾನ ಸಮಾಜ ನಮ್ಮದು. ಅತಿವೃಷ್ಟಿ, ಅನಾವೃಷ್ಟಿಯಿಂದ ಬೆಳೆ ಹಾನಿ ಆಗುತ್ತಿದ್ದು, ಜೀವನ ಕಟ್ಟಿಕೊಳ್ಳಲು ಕಷ್ಟವಾಗಿದೆ. ಹೀಗಾಗಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಸಮಾಜಕ್ಕೆ ಮೀಸಲಾತಿ ಅನಿವಾರ್ಯ ಆಗಿದೆ. ಈ ಕಾರಣಕ್ಕೆ ಸರ್ಕಾರ ನಮಗೆ ಮೀಸಲಾತಿ ನೀಡಬೇಕಿದೆ. ಇದಕ್ಕಾಗಿ ಹೋರಾಟಕ್ಕೆ ನಾಂದಿ ಹಾಡಲಾಗಿದೆ. ಆರಂಭಿಕ ಹಂತದಲ್ಲಿ ಉಪವಾಸ ಸತ್ಯಾಗ್ರಹ ಮಾಡಲಾಗುತ್ತಿದೆ. ಬೇಡಿಕೆ ಈಡೇರುವವರೆಗೆ ಭವಿಷ್ಯದಲ್ಲಿ ಹೋರಾಟ ನಡೆಸಲಾಗುವುದು ಎಂದರು.