ಕರ್ನಾಟಕ

karnataka

ETV Bharat / state

ಬಿಜೆಪಿ-ಜೆಡಿಎಸ್ ನಾಯಕರಿಗೆ ನನ್ನ ಕಂಡ್ರೆ ಭಯ: ಸಿದ್ದರಾಮಯ್ಯ - Former CM Siddaramaiah update

ಉಪಚುನಾವಣೆ ಕುರಿತಾದ ಸಮೀಕ್ಷೆಗಳನ್ನು ನಾನು ನಂಬುವುದಿಲ್ಲ. ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ‌ ಸಮೀಕ್ಷೆಗಳು ಏನಾಗಿವೆ. ಅದೆಲ್ಲ ಅಂದಾಜು ಮೇಲೆ ಸಮೀಕ್ಷೆ ಮಾಡಿರುತ್ತಾರೆ.‌ ಹೀಗಾಗಿ ಸಮೀಕ್ಷೆಗಳನ್ನು ‌ನಾನು ನಂಬುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

bng
ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

By

Published : Dec 8, 2019, 5:38 PM IST

ಬೆಳಗಾವಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ನನ್ನ ಕಂಡರೆ ಭಯ ಇದೆ. ಅದಕ್ಕೆ‌ ಪದೇ ಪದೇ ನನ್ನ ಹೆಸರು ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ‌ಹೇಳಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ‌ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಕಂಡರೆ ಜೆಡಿಎಸ್​ನವರಿಗೂ ಭಯ.‌ ಬಿಜೆಪಿಯವರಿಗೂ ಭಯವಿದೆ. ಹೀಗಾಗಿ‌‌ ನನ್ನ ಹೆಸರಿಲ್ಲದೇ ಪ್ರತಿಕ್ರಿಯೆ ‌ನೀಡಲು ಅವರಿಂದ‌ ಸಾಧ್ಯವಾಗುತ್ತಿಲ್ಲ ಎಂದು ತಿರು.

ಉಪಚುನಾವಣೆ ಕುರಿತಾದ ಸಮೀಕ್ಷೆಗಳನ್ನು ನಾನು ನಂಬುವುದಿಲ್ಲ. ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ‌ ಸಮೀಕ್ಷೆಗಳು ಏನಾಗಿವೆ. ಅದೆಲ್ಲ ಅಂದಾಜು ಮೇಲೆ ಸಮೀಕ್ಷೆ ಮಾಡಿರುತ್ತಾರೆ.‌ ಹೀಗಾಗಿ ಸಮೀಕ್ಷೆಗಳನ್ನು ನಂಬುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಪ್ರವಾಹ ಪರಿಹಾರದ ಬಗ್ಗೆ ಸರ್ಕಾರ ಇಂದಿನವರೆಗೂ ತಲೆಕೆಡಸಿಕೊಂಡಿಲ್ಲ. ಹತ್ತು ಸಾವಿರ, ಒಂದು ಲಕ್ಷ ರೂಪಾಯಿ ಕೊಟ್ಟು ಕೈತೊಳೆದುಕೊಂಡಿದ್ದಾರೆ. ಅನೇಕ‌ ಜನ ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ರಾಜ್ಯ ಸರ್ಕಾರದಿಂದ ಹಣಕಾಸು ಸ್ಥಿತಿಗತಿ ನಿಭಾಯಿಸಲು ಆಗುತ್ತಿಲ್ಲ. ಕೇಂದ್ರ ಸರ್ಕಾರದಿಂದ‌ ರಾಜ್ಯಕ್ಕೆ 5,600 ಕೋಟಿ ಜಿಎಸ್‌ಟಿ ಹಣ ಬರಬೇಕು. ನಮ್ಮ ಪಾಲನ್ನು ಕೇಂದ್ರ ಸರ್ಕಾರ ಇನ್ನೂ ಕೊಟ್ಟಿಲ್ಲ.‌ ಹೀಗಾಗಿ ಸರ್ಕಾರಿ ನೌಕರರಿಗೆ ಸಂಬಳ ನೀಡಲು ಆಗುತ್ತಿಲ್ಲ. ಇಂಥ ಸಮಯದಲ್ಲಿ ‌ಪ್ರಧಾನಿ ಹಾಗೂ ಹಣಕಾಸು ಸಚಿವರನ್ನು ಭೇಟಿ‌ ಮಾಡಿ ಹಣ ಬಿಡುಗಡೆಗೆ ಮುಂದಾಗಬೇಕಿದ್ದ ಸಿಎಂ ಯಡಿಯೂರಪ್ಪ ಅವರು ಸರ್ಕಾರ ಉಳಿಸಿಕೊಳ್ಳಲು ಭಜನೆ ಮಾಡುತ್ತ ಕುಳಿತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಪ್ರವಾಹ ಪರಿಹಾರದ ಎರಡನೇ ಕಂತನ್ನು ಕೇಂದ್ರ ಸರ್ಕಾರ ಇನ್ನೂ ಕೊಟ್ಟಿಲ್ಲ, ಕೊಡೋದು ಇಲ್ಲ. ತಮ್ಮ‌ ಹುಳುಕು, ತಪ್ಪು ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಏನೇನೋ ಮಾತನಾಡುತ್ತಿದ್ದಾರೆ. ಜನರಿಗೆ ತಪ್ಪು ಮಾಹಿತಿ ಕೊಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಉಪಚುನಾವಣೆ ನಂತರ ಕಾಂಗ್ರೆಸ್ ಕಥೆ ಮುಗಿಯುತ್ತೆ ಎಂಬ ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಹೇಳಿಕೆಗೆ‌ ತಿರುಗೇಟು ನೀಡಿದ ಸಿದ್ದರಾಮಯ್ಯ, ಸಚಿವರಾಗಿ ಈಶ್ವರಪ್ಪ ಮತ್ತು ಜಗದೀಶ್ ಶೆಟ್ಟರ್ ಭ್ರಮೆಯಲ್ಲಿದ್ದಾರೆ. ಕಾಂಗ್ರೆಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇನೆ ಎನ್ನುವುದು ಕೇವಲ ಭ್ರಮೆ ಎಂದು ಕುಟುಕಿದರು.

ABOUT THE AUTHOR

...view details