ಕೊರೊನಾ ವಿರುದ್ಧ ಹೋರಾಡುತ್ತಿರುವ ಪೊಲೀಸ್ ಸಿಬ್ಬಂದಿಗೆ ಸನ್ಮಾನ - ಹೋರಾಟಗಾರ ಮಹಾವೀರ ಮೋಹಿತೆ
ಲಾಕ್ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಲ್ಲಿ ಶ್ರಮಿಸುತ್ತಿರುವ ಪೊಲೀಸರಿಗೆ ಎಷ್ಟು ಧನ್ಯವಾದ ಹೇಳಿದರೂ ಕಡಿಮೆಯೇ ಎಂದು ಹೋರಾಟಗಾರ ಮಹಾವೀರ ಮೋಹಿತೆ ಹೇಳಿದರು.
ಪೊಲೀಸ್ ಸಿಬ್ಬಂದಿಗೆ ಗೌರವಯುತವಾಗಿ ಸನ್ಮಾನಿಸಿದ ಚಿಕ್ಕೋಡಿ ಜನತೆ
ಚಿಕ್ಕೋಡಿ:ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಹಗಲು ರಾತ್ರಿ ಎನ್ನದೇ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ದುಡಿಯುತ್ತಿರುವ ತಾಲೂಕಿನ ಪೊಲೀಸ್ ಸಿಬ್ಬಂದಿಗೆ ಇಲ್ಲಿನ ಜನ ಸನ್ಮಾನ ಮಾಡಿ ಗೌರವಿಸಿದರು.
ತಾಲೂಕಿನ ಪೊಲೀಸ್ ಠಾಣೆಯ ಸಿಪಿಐ ಆರ್.ಆರ್.ಪಾಟೀಲ, ಪಿಎಸ್‍ಐ ರಾಕೇಶ ಬಗಲಿ ಹಾಗೂ ಠಾಣೆಯ ಸಿಬ್ಬಂದಿಗೆ ಸನ್ಮಾನಿಸಲಾಯಿತು. ಲಾಕ್ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಲ್ಲಿ ಶ್ರಮಿಸುತ್ತಿರುವ ಪೊಲೀಸರಿಗೆ ಎಷ್ಟು ಧನ್ಯವಾದ ಹೇಳಿದರೂ ಕಡಿಮೆಯೇ ಎಂದು ಹೋರಾಟಗಾರ ಮಹಾವೀರ ಮೋಹಿತೆ ಹೇಳಿದರು.