ಬೆಳಗಾವಿ: ಹಳೆಯ ದ್ವೇಷ ಹಿನ್ನೆಲೆಯಲ್ಲಿ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಾಗಿದ್ದು ಓರ್ವನ ಹತ್ಯೆಯಾಗಿದೆ. 7 ಮಂದಿ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಹತ್ಯೆಯಾದವನನ್ನು ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸುಣಕುಪ್ಪಿ ಗ್ರಾಮದ ಮುದುಕಪ್ಪ ಅಂಗಡಿ(25) ಎಂದು ಗುರುತಿಸಲಾಗಿದೆ. ಘರ್ಷಣೆಯಲ್ಲಿ ಏಳು ಮಂದಿಗೆ ಗಾಯಗಳಾಗಿದ್ದು, ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಬೆಳಗಾವಿಯಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ; ಓರ್ವನ ಕೊಲೆ, 7 ಜನರಿಗೆ ಗಾಯ
ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಓರ್ವ ಕೊಲೆಗೀಡಾಗಿದ್ದರೆ, 7 ಮಂದಿ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಬೆಳಗಾವಿಯಲ್ಲಿ ಎರಡು ಗುಂಪುಗಳ ಮಧ್ಯೆ ಗಲಾಟೆ; ಓರ್ವನ ಹತ್ಯೆ, 6 ಜನರಿಗೆ ಗಾಯ
ಮಾರಕಾಸ್ತ್ರಗಳಿಂದ ಕೊಚ್ಚಿ ಮುದುಕಪ್ಪ ಅಂಗಡಿ(25) ಎಂಬಾತನನ್ನು ಹತ್ಯೆಗೈಯಲಾಗಿದೆ. ಏಳು ಜನರಿಗೆ ಗಾಯಗಳಾಗಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಳೆ ದ್ವೇಷ ಹಿನ್ನೆಲೆಯಲ್ಲಿ ಎರಡು ಗುಂಪುಗಳ ಸದಸ್ಯರು ಪರಸ್ಪರ ಹೊಡೆದಾಡಿಕೊಂಡಿದ್ದು, ಸದ್ಯ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ :6 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ ದಂಡಸಹಿತ 20 ವರ್ಷ ಜೈಲುಶಿಕ್ಷೆ