ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ವಿಧಾನಸಭಾ ಮತಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ ಕಾಣೆಯಾಗಿದ್ದು, ಹುಡುಕಿ ಕೊಡಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಶಾಸಕರನ್ನು ಹುಡುಕಿಕೊಡಿ.. ಕಾಂಗ್ರೆಸ್ ಕಾರ್ಯಕರ್ತರಿಂದ ಒತ್ತಾಯ - kannada newspaper, etvbharat, ಶಾಸಕರನ್ನು ಹುಡುಕಿಕೊಡಿ, ಕಾಂಗ್ರೆಸ್ ಕಾರ್ಯಕರ್ತರು, ಬೆಳಗಾವಿ, ಚಿಕ್ಕೋಡಿ, ಅಥಣಿ ವಿಧಾನಸಭಾ ಮತಕ್ಷೇತ್ರದ ಶಾಸಕ, ಮಹೇಶ್ ಕುಮಟಳ್ಳಿ, ಪೋಲಿಸ್ ಠಾಣೆ
2018ರ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೆಳಗಾವಿ ಜಿಲ್ಲೆಯ ಅಥಣಿ ಮತಕ್ಷೇತ್ರಕ್ಕೆ ಮಹೇಶ್ ಕುಮಟಳ್ಳಿ ಆಯ್ಕೆಯಾಗಿದ್ದರು. ಆದರೆ, ಸದ್ಯ ಅವರು ಕಾಣೆಯಾಗಿದ್ದು, ನಮ್ಮ ಶಾಸಕರನ್ನು ಹುಡುಕಿ ಕೊಡಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಪೋಲಿಸ್ ಠಾಣೆ ಮೆಟ್ಟಿಲೇರಿದ್ದಾರೆ.
ಮಹೇಶ್ ಕುಮಟಳ್ಳಿ
ಕಳೆದ 2018 ರ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಥಣಿ ಮತಕ್ಷೇತ್ರಕ್ಕೆ ಮಹೇಶ್ ಕುಮಟಳ್ಳಿ ಆಯ್ಕೆಯಾಗಿದ್ದರು. ಆದರೆ, ಸದ್ಯ ಅವರು ಕ್ಷೇತ್ರದಲ್ಲಿಲ್ಲ.
ಮಹೇಶ್ ಕುಮಟಳ್ಳಿ ಅವರು ಕೆಲ ದಿನಗಳಿಂದ ನಾಪತ್ತೆಯಾಗಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಹಲವಾರು ಅಭಿವೃದ್ದಿ ಕೆಲಸಗಳನ್ನ ಮಾಡಬೇಕಾಗಿದೆ. ಈ ಭಾಗದಲ್ಲಿ ತೀವ್ರ ಬರಗಾಲ ಎದುರಿಸುತ್ತಿದ್ದೇವೆ. ದಯಮಾಡಿ ನಮ್ಮ ಶಾಸಕರನ್ನು ಹುಡುಕಿ ಕೊಡಿ ಎಂದು ಅಥಣಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.