ಬೆಂಗಳೂರು:ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಟಿಕೆಟ್ ಪಡೆಯದೇ ಪ್ರಯಾಣಿಸಿದ 6335 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ.
ಟಿಕೆಟ್ ರಹಿತ ಪ್ರಯಾಣ: ಒಂದೇ ತಿಂಗಳಲ್ಲಿ 6335 ಪ್ರಯಾಣಿಕರಿಗೆ ದಂಡ ಜಡಿದ ಕೆಎಸ್ಆರ್ಟಿಸಿ - Penalties for passengers
ಕಳೆದ 2019ರ ಡಿಸೆಂಬರ್ನಲ್ಲಿ ತಿಂಗಳಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ, ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಟಿಕೆಟ್ ರಹಿತ ಪ್ರಯಾಣ ಬೆಳೆಸಿದ 6335 ಪ್ರಯಾಣಿಕರಿಗೆ ದಂಡ ವಿಧಿಸಿದೆ.
![ಟಿಕೆಟ್ ರಹಿತ ಪ್ರಯಾಣ: ಒಂದೇ ತಿಂಗಳಲ್ಲಿ 6335 ಪ್ರಯಾಣಿಕರಿಗೆ ದಂಡ ಜಡಿದ ಕೆಎಸ್ಆರ್ಟಿಸಿ fines-for-6335-passengers-traveling-without-tickets](https://etvbharatimages.akamaized.net/etvbharat/prod-images/768-512-5792607-thumbnail-3x2-bus.jpg)
fines-for-6335-passengers-traveling-without-tickets
ಕಳೆದ 2019ರ ಡಿಸೆಂಬರ್ನಲ್ಲಿ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 49,079 ವಾಹನಗಳನ್ನು ತನಿಖೆಗೆ ಒಳಪಡಿಸಿತ್ತು. ಅದರಲ್ಲಿ 5129 ಪ್ರಕರಣಗಳನ್ನು ಪತ್ತೆ ಹಚ್ಚಿ, 6335 ಟಿಕೆಟ್ ರಹಿತ ಪ್ರಯಾಣಿಕರಿಂದ 8,40,187 ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿದೆ.
ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 1,03,634 ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ ಹಾಗೂ ತಪ್ಪಿತಸ್ಥರ ವಿರುದ್ಧ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಿದ್ದಾರೆ.