ಚಿಕ್ಕೋಡಿ :ಸಕ್ಕರೆ ಕಾರ್ಖಾನೆಯ ಬಾಯ್ಲರ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕೋಟ್ಯಂತರ ಮೌಲ್ಯದ ವಸ್ತುಗಳನ್ನು ಸುಟ್ಟು ಭಸ್ಮವಾಗಿರುವ ಘಟನೆ ಉಗಾರ್ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದೆ.
ಕಾಗವಾಡದಲ್ಲಿ ಸಕ್ಕರೆ ಕಾರ್ಖಾನೆಗೆ ಬೆಂಕಿ : ಕೋಟ್ಯಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ - ಕಾಗವಾಡದಲ್ಲಿ ಉಗಾರ್ ಸಕ್ಕರೆ ಕಾರ್ಖಾನೆಗೆ ಬೆಂಕಿ
ಕಾಗವಾಡ ತಾಲೂಕಿನ ಉಗಾರ ಗ್ರಾಮದಲ್ಲಿರುವ ಉಗಾರ್ ಸಕ್ಕರೆ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಕೋಟ್ಯಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.

ಕಾಗವಾಡ ತಾಲೂಕಿನ ಉಗಾರ ಗ್ರಾಮದಲ್ಲಿರುವ ಉಗಾರ್ ಸಕ್ಕರೆ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಈಗಾಗಲೇ ಸ್ಥಳದಲ್ಲಿ ಚಿಕ್ಕೋಡಿ, ರಾಯಬಾಗ, ಅಥಣಿ ತಾಲೂಕಿನ 20ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳಲ್ಲಿ ಆಗಮಿಸಿರುವ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಸಕ್ಕರೆ ಕಾರ್ಖಾನೆಗೆ ಬೆಂಕಿಗೆ ಕೋಟ್ಯಂತರ ಮೌಲ್ಯದ ಸಕ್ಕರೆ ಹಾಗೂ ಕಾರ್ಖಾನೆಯ ಸಲಕರಣೆಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್ ಬೆಂಕಿ ಅವಘಡದಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.