ಬೆಳಗಾವಿ :ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಬೆಳಗಾವಿಯ ಮಿಲಿಟರಿ ಆಸ್ಪತ್ರೆ ಬಳಿ ನಡೆದಿದೆ.
ಚಲಿಸುತ್ತಿದ್ದ ಕಾರಿಗೆ ಬೆಂಕಿ: ಕುಂದಾನಗರಿಯಲ್ಲಿ ಅವಘಡ - ಬೆಳಗಾವಿ ಸುದ್ದಿ
ಬೆಳಗಾವಿಯ ಮಿಲಿಟರಿ ಆಸ್ಪತ್ರೆ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ.
ಚಲಿಸುತ್ತಿದ್ದ ಕಾರಿಗೆ ಬೆಂಕಿ : ಕುಂದಾನಗರಿಯಲ್ಲಿ ಅವಘಡ
ಕ್ಯಾಂಪ್ ಪ್ರದೇಶದಿಂದ ಗಣೇಶಪುರ ಕಡೆಗೆ ಹೊರಟಿದ್ದ ಇಂಡಿಕಾ ವಿಸ್ತಾ ಕಾರಿನ ಎಂಜಿನ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಏರ್ ಗ್ಯಾಸ್ ಮೂಲಕ ಬೆಂಕಿಯನ್ನು ನಂದಿಸಿದ್ದಾರೆ.
ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಕಾರಿನ ಮುಂಭಾಗ ಸಂಪೂರ್ಣ ಬೆಂಕಿಗಾಹುತಿ ಆಗಿದೆ. ಘಟನೆ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.