ಬೆಳಗಾವಿ: ಫಸಲಿಗೆ ಬಂದಿದ್ದ ಕಬ್ಬಿನ ಗದ್ದೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ನಡೆದಿದೆ.
ತಿಗಡಿ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಕಬ್ಬಿನ ಗದ್ದೆಗೆ ಬೆಂಕಿ ಇಟ್ಟಿದ್ದು, ಸುಮಾರು ಅರ್ಧ ಎಕರೆಗೂ ಹೆಚ್ಚು ಕಬ್ಬು ಬೆಂಕಿಗಾಹುತಿಯಾಗಿದೆ. ನಾವಲಗಟ್ಟಿ ಗ್ರಾಮದ ಚಂದ್ರಯ್ಯ ವಿರಕ್ತಮಠ ಎಂಬುವರಿಗೆ ಸೇರಿದ ಕಬ್ಬಿನ ಗದ್ದೆಗೆ ಬೆಂಕಿ ಹಚ್ಚಲಾಗಿದೆ. ವೈಯಕ್ತಿಕ ದ್ವೇಷ ಹಿನ್ನೆಲೆ ಬೆಂಕಿ ಹಚ್ಚಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.