ಬೆಳಗಾವಿ: ಬೆಳಗಾವಿಯಿಂದ ಗೋವಾಕ್ಕೆ ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಐವರ ಬಂಧನ - Belagavi Rural Police Station
ಗೋವಾಕ್ಕೆ ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ
ಕಳೆದ ಜೂ.5ರಂದು ರಾತ್ರಿ ಗೋವಾಕ್ಕೆ ಗೋಮಾಂಸ ಸಾಗಿಸುತ್ತಿದ್ದ ವಾಹನವನ್ನು ತಾಲೂಕಿನ ಕರ್ಲೇ ಗ್ರಾಮದ ಹತ್ತಿರ ತಡೆದು ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಗರದ ವಡಗಾವಿಯ ಆಕಾಶ ವಾಯಿಂಗಡೆ, ವಾಘವಾಡೆ ಗ್ರಾಮದವರಾದ ರವಿ ಮುಸಳೆ, ರಾಮಲಿಂಗ ನಾಯಕ, ರಘು ಕುಡಚಿಕರ ಹಾಗೂ ಭರಮಣಿ ಪಾಟೀಲ ಎಂಬುವರನ್ನು ಬಂಧಿಸಿದ್ದಾರೆ.
ಈ ಬಗ್ಗೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.