ಬೆಳಗಾವಿ:ಕೊರೊನಾ ಸೋಂಕು ತಗುಲಿದ್ದ 3 ಮಹಿಳೆಯರು ಸೇರಿದಂತೆ ಒಟ್ಟು 5 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಬೆಳಗಾವಿಯಲ್ಲಿ ಐವರು ಕೊರೊನಾ ಸೋಂಕಿತರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಇಂದು ನಗರದ ಬಿಮ್ಸ್ ಆಸ್ಪತ್ರೆಯಿಂದ 5 ಮಂದಿ ಕೊರೊನಾ ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ಇದರಲ್ಲಿ ಮೂವರು ಮಹಿಳೆಯರು ಸೇರಿದ್ದು, ಇದೀಗ ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಎಂದು ಬಿಮ್ಸ್ ನಿರ್ದೇಶಕರು ಮಾಹಿತಿ ನೀಡಿದ್ದಾರೆ.
ಬೆಳಗಾವಿಯಲ್ಲಿ ಐವರು ಕೊರೊನಾ ಸೋಂಕಿತರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ 5 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಎಂದು ಬಿಮ್ಸ್ ನಿರ್ದೇಶಕ ವಿನಯ್ ದಾಸ್ತಿಕೊಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೆಹಲಿಯ ಧರ್ಮಸಭೆಯಲ್ಲಿ ಪಾಲ್ಗೊಂಡು ಬಂದಿದ್ದ ತಬ್ಲಿಘಿಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಪಿ-482, ಪಿ-485, ಪಿ-486, ಪಿ-487, ಪಿ-494 ಗುಣಮುಖರಾಗಿದ್ದಾರೆ.