ಅಥಣಿ:ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಕ್ಷೇತ್ರದಲ್ಲಿ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನೆರೆ ಪರಿಹಾರ ವಿಳಂಬದಿಂದಾಗಿ ಬೆಳಗಾವಿ ಜಿಲ್ಲೆ ಅಥಣಿಯ ಹುಲಗಬಾಳಿ ಗ್ರಾಮದ ರೈತ ಅಮೋಘಸಿದ್ದ ಬಾಬು ಕಬ್ಬೂರ (45) ಎಂಬಾತ ಮನನೊಂದು ಕಬ್ಬಿಗೆ ಸಿಂಪಡಿಸುವ ಔಷಧಿ ಸೇವಿಸಿದ್ದರು.

ಸಿಂಡಿಕೇಟ್ ಬ್ಯಾಂಕ್‌ನಲ್ಲಿ ಮತ್ತು ಖಾಸಗಿಯಾಗಿ ₹4 ಲಕ್ಷಕ್ಕಿಂತ ಅಧಿಕ ಸಾಲ ಮಾಡಿದ್ದ ಎಂದು ತಿಳಿದುಬಂದಿದೆ.
ವಿಷ ಸೇವಿಸುತ್ತಿದ್ದಂತೆಯೇ ಆತನನ್ನು ಸರ್ಕಾರಿ ಆಸ್ಪತ್ರೆಗೆ ಕರೆ ತರಲಾಗಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಈ ಕುರಿತು ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.