ಚಿಕ್ಕೋಡಿ:ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಂದೇಶ್ವರ ಗ್ರಾಮದಲ್ಲಿ ಸುಸಜ್ಜಿತ ಪುನರ್ವಸತಿ ಕಲ್ಪಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಅಥಣಿ-ಜಮಖಂಡಿ ರಸ್ತೆ ತಡೆದು ಇಂದು ಪ್ರತಿಭಟನೆ ನಡೆಸಿದರು.
ಪ್ರವಾಹ ಹಿನ್ನೆಲೆ ಮುಳುಗಡೆಯಾದ ಗ್ರಾಮಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ 2014ರಿಂದಲೂ ಈ ಗ್ರಾಮಸ್ಥರು ನಿರಂತರ ಪ್ರತಿಭಟನೆ ನಡೆಸುತ್ತಲೇ ಬಂದಿದ್ದಾರೆ. ಅಧಿಕಾರಿಗಳಿಗೆ ಜನಪ್ರತಿನಿಧಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ಸಿಗದೆ ಕಾರಣ ಇಂದು ಮತ್ತೆ 500 ಕ್ಕೂ ಹೆಚ್ಚು ಮಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಹಿಪ್ಪರಗಿ ಗ್ರಾಮದಲ್ಲಿ ಜೀರೋ ಪಾಯಿಂಟ್ ಎಂಬ ಸ್ಥಳದಲ್ಲಿ ನಂದೇಶ್ವರ ಗ್ರಾಮಕ್ಕೆ ಪುನರ್ವಸತಿ ಕಲ್ಪಿಸಲಾಗಿದೆ. ಆದರೆ ಅದು ಅವೈಜ್ಞಾನಿಕ ಎಂದು ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.