ಬೆಳಗಾವಿ:ನೆರೆ ಪರಿಹಾರದ ಸರ್ವೆಯಲ್ಲಿ ತಾರತಮ್ಯ ನಡೆದಿದೆ ಎಂದು ಆರೋಪಿಸಿ ಸಪ್ತಸಾಗರ ಗ್ರಾಮ ಪಂಚಾಯತ್ಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದರು.
ನೆರೆ ಸಂತ್ರಸ್ತರಿಂದ ಪ್ರತಿಭಟನೆ, ಗ್ರಾಪಂ ಕಚೇರಿಗೆ ಬೀಗ ಜಡಿದು ಆಕ್ರೋಶ..
ನೆರೆ ಪರಿಹಾರದ ಸರ್ವೆಯಲ್ಲಿ ತಾರತಮ್ಯ ನಡೆದಿದೆ ಎಂದು ಆರೋಪಸಿ ಸಪ್ತಸಾಗರ ಗ್ರಾಮ ಪಂಚಾಯತ್ ಕಚೇರಿಗೆ ಬೀಗ ಜಡಿದು ಜನ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದಲ್ಲಿ ನೆರೆ ಪರಿಹಾರ ವಿಳಂಬ ಮತ್ತು ತಾರತಮ್ಯ ಖಂಡಿಸಿ ಪ್ರತಿಭಟನೆ ನಡೆಸಿದರು. ಗ್ರಾಮದ ನೂರಾರು ಸಂತ್ರಸ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸರಿಯಾಗಿ ಸರ್ವೆ ನಡೆದಿಲ್ಲ, ಪಂಚಾಯತ್ನಲ್ಲಿ ತಿದ್ದುಪಡಿ ಮಾಡಿದ್ದಾರೆ. ಜತೆಗೆ ಸರ್ವೆಯಲ್ಲಿ ಸಂತ್ರಸ್ತ ಹೆಸರು ನಾಪತ್ತೆಯಾಗಿದೆ ಎಂದು ಪ್ರತಿಭಟನೆ ನಡೆಸಿದರು. ಈ ವೇಳೆ ಸಪ್ತಸಾಗರ ಗ್ರಾಮ ಪಂಚಾಯತ್ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದರು.
ಇಷ್ಟೆಲ್ಲಾ ಗಲಾಟೆ ನಡೆದರೂ ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಸಿಬ್ಬಂದಿ ಆಗಮಿಸದಿರುವುದು ಪ್ರತಿಭಟನಾರಿರತ ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಯಿತು.