ಕರ್ನಾಟಕ

karnataka

ETV Bharat / state

ಬೀದಿಗೆ ಬಿದ್ದ ನೆರೆ ಸಂತ್ರಸ್ತರ ಬದುಕು: ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿ ಜನ - flood in Belagavi

ನೆರೆ ಪೀಡಿತ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಹೆಚ್ಚಾಗಿದ್ದು, ಆದಷ್ಟು ಬೇಗ ಅಧಿಕಾರಿಗಳು ಔಷಧ ಸಿಂಪಡನೆ ಕಾರ್ಯಕ್ಕೆ ಮುಂದಾಗಬೇಕೆಂದು ಜನರು ಆಗ್ರಹಿಸುತ್ತಿದ್ದಾರೆ.

ಔಷಧ ಸಿಂಪಡನೆ ಕಾರ್ಯ

By

Published : Aug 22, 2019, 12:25 PM IST

ಚಿಕ್ಕೋಡಿ: ಪ್ರವಾಹಕ್ಕೆ ನಲುಗಿ ಹೋಗಿದ್ದ ಜನರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ನೆರೆ ಪೀಡಿತ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಹೆಚ್ಚಾಗುವ ಸಂಭವ ಕಾಣುತ್ತಿದೆ.

ಸರ್ಕಾರ ಪರಿಹಾರ ಕೇಂದ್ರಗಳಲ್ಲಿದ್ದ ಸಂತ್ರಸ್ತರಿಗೆ ಮೊದಲ ಹಂತದ 3800 ರೂ. ಚೆಕ್ ಕೊಟ್ಟು ಮನೆಗೆ ಕಳುಹಿಸಿದೆ. ನೆರೆ ಪೀಡಿತ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮ ಕೈಗೊಳ್ಳಬೇಕಿದ್ದ ಅರೋಗ್ಯ ಇಲಾಖೆ ಮತ್ತು ಸ್ಥಳೀಯ ಪಂಚಾಯತಿ ಅಧಿಕಾರಿಗಳ ಮಂದಗತಿಯ ಕೆಲಸದಿಂದಾಗಿ, ಪ್ರವಾಹ ಪೀಡಿತ ಗ್ರಾಮಗಳಲ್ಲಿ ದುರ್ವಾಸನೆ ಬೀರುತ್ತಿದೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗದ ಭೀತಿ

ಕೆಲ ಪಂಚಾಯತಿಗಳಲ್ಲಿ ಫಾಗಿಂಗ್ ಮಷಿನ್​ಗಳಿಲ್ಲದ ಕಾರಣ ಕೆಲ ಗ್ರಾಮಗಳಲ್ಲಿ ಮಾತ್ರ ಔಷಧ ಸಿಂಪಡನೆ ಮಾಡುತ್ತಿದ್ದು, ಇನ್ನುಳಿದ ಗ್ರಾಮಗಳಲ್ಲಿ ಔಷಧ ಸಿಂಪಡನೆ ಕಾರ್ಯ ಪ್ರಾರಂಭವಾಗಿಲ್ಲ. ಇದರಿಂದ ನದಿ ತೀರದ ಜನರು ಸಾಂಕ್ರಾಮಿಕ ರೋಗಗಳಿಗೆ ಹೆದರುತ್ತಿದ್ದಾರೆ. ಆದಷ್ಟು ಬೇಗ ಅಧಿಕಾರಿಗಳು ಔಷಧ ಸಿಂಪಡನೆ ಕಾರ್ಯಕ್ಕೆ ಮುಂದಾಗಬೇಕೆಂದು ಜನರು ಆಗ್ರಹಿಸುತ್ತಿದ್ದಾರೆ.

ABOUT THE AUTHOR

...view details