ಬೆಳಗಾವಿ: ಧಾರಾಕಾರ ಮಳೆಯಿಂದ ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಮಲಪ್ರಭಾ ನದಿ ಆರ್ಭಟಕ್ಕೆ ರಾಮದುರ್ಗದ 15 ಗ್ರಾಮಗಳಲ್ಲಿ ಪ್ರವಾಹ ಭೀತಿ: ಹೈ ಅಲರ್ಟ್ ಘೋಷಣೆ - Floods
ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾರಣ ರಾಮದುರ್ಗ ತಾಲೂಕಿನ 15ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾರಣ ರಾಮದುರ್ಗ ತಾಲೂಕಿನ 15ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದೆ. ಹೀಗಾಗಿ ಗ್ರಾಮದ ಜನರು ಮನೆಗಳನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಮಲಪ್ರಭಾ ನದಿಯಲ್ಲಿ ಒಳಹರಿವು ಹೆಚ್ಚಾಗಿದ್ದು, ನವಿಲುತೀರ್ಥ ಡ್ಯಾಂನಿಂದ 22 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.
ರಾಮದುರ್ಗ ತಾಲೂಕಿನ ಅವರಾದಿ, ಸುನ್ನಾಳ, ಸುರೇಬಾನ್ ಗ್ರಾಮಗಳಿಗೆ ಜಲ ದಿಗ್ಬಂಧನ ಹಾಕಿದೆ. ಸುರೇಬಾನ ಗ್ರಾಮದ ಸರ್ಕಾರಿ ಶಾಲೆಯ ಸುತ್ತಲೂ ನೀರು ತುಂಬಿಕೊಂಡಿದೆ. ಅವರಾದಿ ಗ್ರಾಮದಲ್ಲಿರುವ 300ಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಇನ್ನು ಹಲವು ಹಳ್ಳಿಗಳು ಪ್ರವಾಹ ಭೀತಿಯಲ್ಲಿವೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಕಟ್ಟೆಚ್ಚರದಿಂದ ಇರುವಂತೆ ನದಿ ಪಾತ್ರದ ಜನರನ್ನು ಎಚ್ಚರಿಸಿದೆ.