ಬೆಳಗಾವಿ: ವಿಷಾಹಾರ ಸೇವಿಸಿ ತಾಯಿ ಮತ್ತು ಮಗ ಮೃತಪಟ್ಟಿರುವ ಘಟನೆ ತಾಲೂಕಿನ ಹುದಲಿ ಗ್ರಾಮದಲ್ಲಿ ನಡೆದಿದೆ. ಭಾನುವಾರ ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪಾರ್ವತಿ ಮಳಗಲಿ (53), ಸೋಮನಿಂಗಪ್ಪ ಮಳಗಲಿ(28) ಸಾವಿಗೀಡಾಗಿದ್ದಾರೆ.
ಬೆಳಗಾವಿ: ವಿಷಾಹಾರ ಸೇವಿಸಿ ತಾಯಿ-ಮಗ ದಾರುಣ ಸಾವು - ಬೆಳಗಾವಿಯಲ್ಲಿ ವಿಷಾಹಾರ ಸೇವಿಸಿ ತಾಯಿ-ಮಗ ಸಾವು
ಹೊಲದ ಕೆಲಸಕ್ಕೆಂದು ತೆರಳಿದ್ದ ತಾಯಿ ಮತ್ತು ಮಗ ಸಂಜೆ ಮನೆಗೆ ಬಂದ ವೇಳೆ ಬಜ್ಜಿ ಸೇವಿಸಿದ್ದರು. ಆ ಬಳಿಕ ಇಬ್ಬರೂ ಅಸ್ವಸ್ಥರಾಗಿ ವಾಂತಿ ಮಾಡಿದ್ದಾರೆ. ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವಿಷಾಹಾರ ಸೇವಿಸಿ ತಾಯಿ-ಮಗ ದಾರುಣ ಸಾವು
ಹೊಲದ ಕೆಲಸಕ್ಕೆಂದು ತೆರಳಿದ್ದ ಇಬ್ಬರು ಸಂಜೆ ಮನೆಗೆ ಬಂದ ವೇಳೆ ಬಜ್ಜಿ ಸೇವಿಸಿದ್ದರು. ಆ ಬಳಿಕ ಅಸ್ವಸ್ಥರಾಗಿ ವಾಂತಿ ಮಾಡಿದ್ದರು. ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸಲಿಲ್ಲ.
ನಿನ್ನೆ ಮೃತದೇಹಗಳ ಮರಣೋತ್ತರ ಪರೀಕ್ಷೆಯ ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರಂತ ನಡೆದಿದೆ.
Last Updated : Oct 5, 2021, 9:07 AM IST