ಬೆಳಗಾವಿ: ಬೆಳಗಿನ ಜಾವ ವಾಯುವಿಹಾರಕ್ಕೆ ತೆರಳಿದ್ದ ಜನರಿಗೆ ಚಿರತೆಯೊಂದು ಕಾಣಿಸಿಕೊಂಡಿರುವ ಮಾಹಿತಿ ಹಿನ್ನೆಲೆ ನಗರದ ಗಾಲ್ಫ್ ಮೈದಾನದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.
ಬೆಳಗಾವಿಯಲ್ಲಿ ಚಿರತೆ ಪ್ರತ್ಯಕ್ಷ ವದಂತಿ: ಸ್ಥಳದಲ್ಲೇ ಬೀಡುಬಿಟ್ಟ ಅರಣ್ಯ ಇಲಾಖೆ ಸಿಬ್ಬಂದಿ - ಬೆಳಗಾವಿ ಸುದ್ದಿ
ಬೆಳಗಾವಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ ಎಂದು ವದಂತಿ ಹರಡಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿ
ಇಲ್ಲಿನ ಹನುಮಾನ್ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿ ಗಾಲ್ಫ್ ಮೈದಾನದಲ್ಲಿ ಸಮೀಪದಲ್ಲಿ ವಾಯು ವಿಹಾರಿಗಳು ಚಿರತೆ ನೋಡಿದ್ದಾರೆ ಎನ್ನಲಾಗಿದ್ದು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಚಿರತೆ ಪ್ರತ್ಯಕ್ಷ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇತ್ತ ಚಿರತೆ ಪ್ರತ್ಯಕ್ಷವಾದ ವದಂತಿ ಹಿನ್ನೆಲೆ ಕುಂದಾನಗರಿ ಜನರು ಬೆಚ್ಚಿಬಿದ್ದಿದ್ದಾರೆ