ಬೆಳಗಾವಿ : ಪ್ರವಾಹಪೀಡಿತ ಪ್ರದೇಶಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಈ ವೇಳೆ ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಅವರು ಮತಬೇಟೆ ನಡೆಸಿದ್ದು, ಮುಂಬರುವ ಉಪಚುನಾವಣೆಗೆ ತಯಾರಿ ನಡಿಸಿರುವ ಅನುಮಾನ ಹುಟ್ಟುಹಾಕಿದೆ.
ಬೆಳಗಾವಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ, ಮತಬೇಟೆ?
ಬೆಳಗಾವಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿಯ ಪ್ರವಾಹ ಪೀಡಿತ ಪ್ರದೇಶಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ
ಗೋಕಾಕ್ ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಬಹಿರಂಗ ಸಮಾವೇಶದಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ ಜಿಲ್ಲೆಯ ಅನೇಕ ಸ್ಥಳೀಯ ನಾಯಕರು ಅವರಿಗೆ ಸಾಥ್ ನೀಡಿದ್ದು, ಉಪಚುನಾವಣೆಗೆ ಈಗಿನಿಂದಲೇ ಕಸರತ್ತು ನಡೆಸಿದ್ದಾರೆ.