ಕರ್ನಾಟಕ

karnataka

ETV Bharat / state

ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರದ ಮೇಲೆ ಒತ್ತಡ: ಹೆಚ್​ಡಿಕೆ

ಪ್ರವಾಹ ಪರಿಹಾರ ಕ್ರಮ ಕೈಗೊಳ್ಳುವ ಬಗ್ಗೆ ಸರ್ಕಾರದ ಮೇಲೆ ಇನ್ನಷ್ಟು ಒತ್ತಡ ಹೇರಲಾಗುವುದು. ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸಿಕೊಡಲು ಸಿಎಂ ಜೊತೆ ಚರ್ಚೆ ನಡೆಸಲಾಗುವುದು ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಕುಮಾರಸ್ವಾಮಿ

By

Published : Aug 10, 2019, 10:22 PM IST

ಬೆಳಗಾವಿ:ಜಿಲ್ಲೆಯ ಸಂಕೇಶ್ವರ ಪಟ್ಟಣದ ಶಂಕರಲಿಂಗ ಮಂಗಲ ಕಾರ್ಯಾಲಯದಲ್ಲಿ ಆರಂಭಿಸಲಾಗಿರುವ ಪರಿಹಾರ ಕೇಂದ್ರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.

ಸಂತ್ರಸ್ತರ ಕೇಂದ್ರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ಸರ್ಕಾರದ ಮೂಲಕ ಮನೆ ಹಾಗೂ ಪರಿಹಾರವನ್ನು ಒದಗಿಸಲು ಪ್ರಯತ್ನಿಸಲಾಗುವುದು. ಈ ಕುರಿತು ಸರ್ಕಾರದ ಮೇಲೆ ಇನ್ನಷ್ಟು ಒತ್ತಡ ಹೇರಲಾಗುವುದು. ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಹಾನಿಯ ಕುರಿತು ಸಮಗ್ರ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಇನ್ನೂ ಒಂದು ತಿಂಗಳು ಬೇಕಾಗಬಹುದು. ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸಿಕೊಡಲು ಸಿಎಂ ಜೊತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಸಂತ್ರಸ್ತರು ಧೈರ್ಯದಿಂದ ಇರಬೇಕು. ಏನಾದರೂ ಸಮಸ್ಯೆಗಳು ಇದ್ದರೆ ವೈಯಕ್ತಿಕವಾಗಿ ಸಾಧ್ಯವಾದಷ್ಟು ಪರಿಹರಿಸಲು ಸಿದ್ಧ. ನಾನು ನಿಮ್ಮೊಂದಿಗೆ ಇರುತ್ತೇನೆ ಎಂದು ಕುಮಾರಸ್ವಾಮಿ ಭರವಸೆ ನೀಡಿದರು. ಮಾಜಿ ಸಚಿವ ಬಂಡೆಪ್ಪ ಕಾಂಶೆಂಪುರ, ಮಾಜಿ ಶಾಸಕ ಎನ್.ಹೆಚ್.ಕೋನರೆಡ್ಡಿ ಮತ್ತಿತರರು ಇದ್ದರು.

ABOUT THE AUTHOR

...view details