ಬೆಳಗಾವಿ: ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು ಭೇಟಿ ನೀಡಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ.
ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅಖಾಡಕ್ಕೆ ಇಂದು ಸಿದ್ದರಾಮಯ್ಯ ಭೇಟಿ - ಪ್ರವಾಹ ಪೀಡಿತ ಪ್ರದೇಶ
ಅನರ್ಹ ಶಾಸಕ ರಮೇಶ್ ಜಾರಿಕಿಹೊಳಿ ಕ್ಷೇತ್ರದಲ್ಲಿ ಪ್ರವಾಹ ಪೀಡಿತ ಪ್ರದೇಶವನ್ನು ಮಾಜಿ ಸಿಎಂ ಸಿದ್ದರಾಮಯ್ಯ ವೀಕ್ಷಿಸಲಿದ್ದಾರೆ. ಭೇಟಿಯ ನಂತರ ಶಾಸಕ ಸತೀಶ್ ಜಾರಕಿಹೊಳಿ, ಲಖನ್ ಜಾರಕಿಹೊಳಿ ಜೊತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗ್ತಿದೆ.
![ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅಖಾಡಕ್ಕೆ ಇಂದು ಸಿದ್ದರಾಮಯ್ಯ ಭೇಟಿ](https://etvbharatimages.akamaized.net/etvbharat/prod-images/768-512-4264276-thumbnail-3x2-bgv.jpg)
ಮಾಜಿ ಸಿಎಂ ಸಿದ್ದರಾಮಯ್ಯ
ಗೋಕಾಕ್ ನಗರ ಹಾಗೂ ತಾಲೂಕಿನ ಲೋಳಸೂರ, ಮೇಳವಂಕಿ, ಅಂಕಲಗಿ ಗ್ರಾಮಗಳ ನಿರಾಶ್ರಿತರ ಕೇಂದ್ರ ಹಾಗೂ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಣೆ ಮಾಡಲಿದ್ದಾರೆ. ಮಧ್ಯಾಹ್ನದ ನಂತರ ರಾಮದುರ್ಗ ಪಟ್ಟಣ ಸೇರಿ ಹಲವು ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. ಸಂಜೆ 7.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ.
ಇನ್ನು ಉಪಚುನಾವಣೆ ತಯಾರಿ ಕುರಿತು ಗೋಕಾಕ್ನಲ್ಲಿ ಸಭೆ ನಡೆಸಲಿರುವ ಸಿದ್ದರಾಮಯ್ಯ ಅವರು ಶಾಸಕ ಸತೀಶ್ ಜಾರಕಿಹೊಳಿ ಹಾಗೂ ಅವರ ಸಹೋದರ ಲಖನ್ ಜಾರಕಿಹೊಳಿ ಜತೆಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗ್ತಿದೆ.