ಚಿಕ್ಕೋಡಿ: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಗ್ರಾಮೀಣ ಭಾಗದ ಕೊವಿಡ್ ರೋಗಿಗಳಿಗೆ ಸಮಸ್ಯೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ 120 ಹಾಸಿಗೆಗಳ ಕೊವಿಡ್ ಆಸ್ಪತ್ರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆನ್ಲೈನ್ ಮೂಲಕ ಉದ್ಘಾಟಿಸಿದರು.
ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಎನ್ಎ ಮಗದುಮ್ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗಾಗಿ 120 ಹಾಸಿಗೆಯ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಚಿಕ್ಕೋಡಿ ಶಾಸಕ ಗಣೇಶ ಹುಕ್ಕೇರಿ ಹಾಗೂ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಭಾಗಿಯಾಗಿದ್ದರು.
ಅಂಕಲಿ ಗ್ರಾಮದಲ್ಲಿ 120 ಹಾಸಿಗೆಗಳ ಕೋವಿಡ್ ಆಸ್ಪತ್ರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆನ್ಲೈನ್ ಮೂಲಕ ಉದ್ಘಾಟನೆ ಗ್ರಾಮೀಣ ಭಾಗದ ಬಡ ರೋಗಿಗಳಿಗೆ ಕೊವೀಡ್ ಕಾರಣ ಯಾವುದೇ ಸಮಸ್ಯೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಶಾಸಕ ಗಣೇಶ ಹುಕ್ಕೇರಿ ಅವರ ಸಹಾಯದಿಂದ ಈ ಆಸ್ಪತ್ರೆಯನ್ನ ಸ್ಥಾಪಿಸಲಾಗಿದೆ. ಆಯುಷ್ಮಾನ ಭಾರತದ ಅಡಿ ಕೆಲವೇ ದಿನಗಳಲ್ಲಿ ಈ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಆಸ್ಪತ್ರೆಯ ಮುಖ್ಯ ವೈದ್ಯ ನೇಮಿನಾಥ ಮಗದುಮ ತಿಳಿಸಿದರು.
ಸರ್ಕಾರ ಆದಷ್ಟು ಬೇಗ ಆಕ್ಸಿಜನ್ ಸಮಸ್ಯೆ ಜೊತೆಗೆ ರೆಮ್ಡೆಸಿವಿರ್ ಔಷಧ ಕೊರತೆಯನ್ನ ನೀಗಿಸಬೇಕು ಇಲ್ಲವಾದಲ್ಲಿ ರೋಗಿಗಳಿಗೆ ಸಾಕಷ್ಟು ಸಮಸ್ಯೆಯಾಗಲಿದೆ ಎಂದು ಅಳಲು ತೋಡಿಕೊಂಡರು. ಬಳಿಕ ಮಾತನಾಡಿದ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಶವ ಸಂಸ್ಕಾರಕ್ಕೆ ಬಡವರಿಗೆ ಅನಕೂಲ ಆಗುವ ನಿಟ್ಟಿನಲ್ಲಿ ಅಣ್ಣಪೂರ್ಣೇಶ್ವರಿ ಫೌಂಡೇಶನ್ ಮೂಲಕ 20 ಲಕ್ಷ ರೂ. ಹಣವನ್ನು ಕೆಪಿಸಿಸಿ ಕಚೇರಿ ಮೂಲಕ ನೀಡಲಾಗುವುದು ಎಂದು ಘೋಷಣೆ ಮಾಡಿದರು.