ಕರ್ನಾಟಕ

karnataka

ETV Bharat / state

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ತೆರಳುತ್ತಿದ್ದ ಕಾರು ಅಪಘಾತ - ಬೆಳಗಾವಿ ಕಾರು ಅಪಘಾತ

ರಾಯಬಾಗ ತಾಲೂಕಿನ ಹಾರೋಗೇರಿ ಪಟ್ಟಣದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತವಾಗಿದೆ.

former dcm lakshman savadi car accident in belagavi
ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾರು ಅಪಘಾತ

By

Published : Aug 31, 2022, 3:30 PM IST

Updated : Aug 31, 2022, 3:40 PM IST

ಚಿಕ್ಕೋಡಿ(ಬೆಳಗಾವಿ): ಜಿಲ್ಲೆಯಲ್ಲಿಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ತೆರೆಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಲಕ್ಷ್ಮಣ ಸವದಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಹಾರೋಗೇರಿ ಪಟ್ಟಣದಲ್ಲಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಸವದಿ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ರಾಯಬಾಗ ತಾಲೂಕಿನ ಹಾರೋಗೇರಿ ಪಟ್ಟಣದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತವಾಗಿದ್ದು, ಕಾರಿನಲ್ಲಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಇತರ ನಾಲ್ವರು ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ಹಾರೋಗೇರಿ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಕ್ಷ್ಮಣ ಸವದಿ ಅವರು ತೆರಳುತ್ತಿದ್ದ ಕಾರು ರಸ್ತೆ ಬದಿಗೆ ಪಲ್ಟಿಯಾಗಿ ಬಿದ್ದಿದೆ.

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾರು ಅಪಘಾತ

ಇದನ್ನೂ ಓದಿ:ಮೈಸೂರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಅನಾರೋಗ್ಯದಿಂದ ಬಯಲಾದ ಪ್ರಕರಣ

ಈ ಕಾರಿನಲ್ಲಿ ಸವದಿ ಸೇರಿದಂತೆ ನಾಲ್ಕು ಜನರು ಪ್ರಯಾಣ ಮಾಡುತ್ತಿದ್ದರು. ಅಥಣಿಯಿಂದ ಬೆಳಗಾವಿಗೆ ಬರುವಾಗ ಕಾರು ಪಲ್ಟಿಯಾಗಿದೆ. ಈ ವೇಳೆ ಸ್ಥಳೀಯರ ಸಹಾಯದಿಂದ ಕಾರನ್ನು ಮೇಲಕ್ಕೆ ಎತ್ತಲಾಗಿದೆ. ಕಾರಿನಲ್ಲಿ ಸಿಲುಕಿದ್ದ ಲಕ್ಷ್ಮಣ ಸವದಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹಾರೋಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ನಡೆದಿದೆ.

Last Updated : Aug 31, 2022, 3:40 PM IST

ABOUT THE AUTHOR

...view details