ಬೆಳಗಾವಿ: ಬಿಎಸ್‌ವೈ ಬೆಂಬಲಿತ ಲಿಂಗಾಯತ ನಾಯಕರನ್ನು ಕಾಂಗ್ರೆಸ್‌ಗೆ ಕರೆತರುವುದು ನಿಶ್ಚಿತ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ನಾಗನೂರು ಮಠದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮುಂಬರುವ ದಿನಗಳಲ್ಲಿ ನಿಶ್ಚಿತವಾಗಿ ಬಿಎಸ್‌ವೈ ಬೆಂಬಲಿತ ಲಿಂಗಾಯತ ನಾಯಕರನ್ನು ಕಾಂಗ್ರೆಸ್‌ಗೆ ಕರೆ ತರುತ್ತೇವೆ ಎಂದರು.
ಲಿಂಗಾಯತ ಸಮುದಾಯದಲ್ಲಿ ಯಡಿಯೂರಪ್ಪ ಬಹಳ ಎತ್ತರದ ನಾಯಕ. ಅದಕ್ಕೆ ಅವರು ಮುಖ್ಯಮಂತ್ರಿ ಆಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲೂ ಪ್ರಕಾಶ್ ಹುಕ್ಕೇರಿ, ಎಂ.ಬಿ ಪಾಟೀಲ್‌ನಂಥ ಹಿರಿಯ ಲಿಂಗಾಯತ ನಾಯಕರಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯತ ನಾಯಕರಿಗೆ ಸ್ಥಾನಮಾನ ನೀಡುವ ಬಗ್ಗೆ ಹೈಕಮಾಂಡ್‌ಗೆ ಮನವರಿಕೆ ಮಾಡಿದ್ದೇವೆ ಎಂದರು.
ಲಿಂಗಾಯತ ಸಮುದಾಯವನ್ನು ಕಾಂಗ್ರೆಸ್ ನಿರ್ಲಕ್ಷಿಸುವುದಿಲ್ಲ. ವೀರೇಂದ್ರ ಪಾಟೀಲ್ ಅವರಿದ್ದಾಗ ಕಾಂಗ್ರೆಸ್ 180 ಸೀಟು ಪಡೆದುಕೊಂಡಿತ್ತು. ವೀರೇಂದ್ರ ಪಾಟೀಲರ ಬಳಿಕ ನಮಗೆ ಸ್ವಲ್ಪ ಹಿನ್ನಡೆಯಾಗಿದೆ. ಅದನ್ನು ಮರಳಿ ಪಡೆಯಲು ಎಲ್ಲ ನಾಯಕರು ಒಗ್ಗೂಡಿ ಸಾಮೂಹಿಕವಾಗಿ ಪ್ರಯತ್ನ ಮಾಡುತ್ತೇವೆ. ಹಿರಿಯರ ಮಾರ್ಗದರ್ಶನದಲ್ಲಿ ಬಿಟ್ಟು ಹೋದವರನ್ನು ಪಕ್ಷಕ್ಕೆ ವಾಪಸ್ ಕರೆತರುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.