ಬೆಳಗಾವಿ:ಬಿಜೆಪಿಯಲ್ಲಿ ಭಿನ್ನಮತ ಹೊಗೆಯಾಡುತ್ತಿದ್ದು, ಯಾವಾಗ ಸ್ಫೋಟವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಮಾಜಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಂದು ವಾರ ಯಾವುದೇ ಸಭೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರದಂತೆ ಆದೇಶ ನೀಡಿದ್ದಾರೆ. ತುರ್ತಾಗಿ ಈ ಆದೇಶ ನೀಡಿದ್ದರಿಂದ ಕೆಲವೆಡೆ ಜನರು ಸೇರುತ್ತಿದ್ದಾರೆ. ಕೊರೊನಾ ಹರಡುತ್ತಿರುವ ಆತಂಕದಿಂದ ಅದ್ದೂರಿ ವಿವಾಹ ಬೇಡ ಎನ್ನುವುದು ನನ್ನ ಅಭಿಪ್ರಾಯ ಎಂದರು.