ಬೆಳಗಾವಿ:ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ - ಕಾಂಗ್ರೆಸ್ ರೋಡ್ ಪಾಲಿಟಿಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಸಂಜಯ್ ಪಾಟೀಲ್ ನಾಲಿಗೆ ಹರಿಬಿಟ್ಟಿದ್ದಾರೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸತ್ಯ ಎದುರಿಸುವ ಶಕ್ತಿ ಇನ್ನೂ ಬರುತ್ತಿಲ್ಲ. ಎಂಎಲ್ಎ ಆಗುವುದಕ್ಕೂ ಮೊದಲು ನಾನು ನಿಮ್ಮ ಮಗಳು, ವಿವಿಧ ಕೆಲಸಗಳನ್ನು ಮಾಡುವುದಾಗಿ ಭರವಸೆ ನೀಡಿದ್ದರು. ಇದಕ್ಕೆ ಜನರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅದಕ್ಕೆ ಬಿಜೆಪಿ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದು ಹೆಬ್ಬಾಳ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.