ಕರ್ನಾಟಕ

karnataka

ETV Bharat / state

ನೆರೆ ಪರಿಹಾರ ವಿಳಂಬ: ಪಂಚಾಯಿತಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ರೈತ - former sucied attemt in chikkodi

ನೆರೆ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ರೈತನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗ್ರಾಮದ ರವೀಂದ್ರ ಗುಣಕೆ ಎಂಬ ರೈತ ಗ್ರಾಮ ಪಂಚಾಯತಿ ಕಚೇರಿ ಮುಂಭಾಗವೇ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಆತ್ಮಹತ್ಯೆಗೆ ಯತ್ನಿಸಿದ ರೈತ

By

Published : Oct 10, 2019, 1:52 PM IST

ಚಿಕ್ಕೋಡಿ:ನೆರೆ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ರೈತನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗ್ರಾಮದ ರವೀಂದ್ರ ಗುಣಕೆ ಎಂಬ ರೈತ ಗ್ರಾಮ ಪಂಚಾಯತಿ ಕಚೇರಿ ಮುಂಭಾಗವೇ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ನೆರೆ ಪರಿಹಾರದ ಕುರಿತು ಗ್ರಾಮ ಪಂಚಾಯತಿಗೆ ಕೇಳಲು ತೆರಳಿದ್ದ ರವೀಂದ್ರನಿಗೆ ಗ್ರಾಮ ಪಂಚಾಯತಿ ಸಿಬ್ಬಂದಿ ಸರಿಯಾಗಿ ಸ್ಪಂದಿಸಿಲ್ಲ. ಹಾಗೆಯೇ ಗ್ರಾಮ ಪಂಚಾಯತಿ ಸಿಬ್ಬಂದಿ ಸರಿಯಾದ ಸರ್ವೆಗಳನ್ನ ಮಾಡುತ್ತಿಲ್ಲ, ಸರ್ಕಾರದಿಂದ ಪರಿಹಾರ ಕೂಡ ಬರುತ್ತಿಲ್ಲವೆಂದು ಮನನೊಂದು ವಿಷ ಸೇವಿಸಿದ್ದಾನೆ. ಇನ್ನು ರವೀಂದ್ರನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ABOUT THE AUTHOR

...view details