ಬೆಳಗಾವಿ:ಕೋವಿಡ್ ಸೋಂಕಿನಿಂದ ಬಳಲುತ್ತಿದ್ದರೈತ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ (78) ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
ಬೆಳಗಾವಿ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದವರಾಗಿದ್ದ ಬಾಬಾಗೌಡ ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ. ವಾರದ ಹಿಂದೆ ಬಾಬಾಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಬಳಿಕ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಾಬಾಗೌಡ ಅವರು 1989ರಲ್ಲಿ ಬೆಳಗಾವಿ ಗ್ರಾಮೀಣ, ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಎರಡೂ ಕ್ಷೇತ್ರದಲ್ಲಿ ಗೆಲುವು ದಾಖಲಿಸಿ ವಿಧಾನಸಭೆ ಪ್ರವೇಶಿಸಿದ್ದರು.