ಕರ್ನಾಟಕ

karnataka

ETV Bharat / state

'ಚಳಿಗಾಲ ಅಧಿವೇಶನ ಬೆಳಗಾವಿಯಲ್ಲೇ ನಡೆಸಿ': ಚಿಕ್ಕೋಡಿಯಲ್ಲಿ ರೈತರ ಆಗ್ರಹ - ಚಿಕ್ಕೋಡಿ ಸುದ್ದಿ

ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲೇ ನಡೆಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತ ಸಂಘಟನೆಗಳು ವಿವಿಧ ರೀತಿಯಲ್ಲಿ ಪ್ರತಿಭಟನೆ‌ ನಡೆಸಿದವು.

ಚಳಿಗಾಲ ಅಧಿವೇಶನ ಬೆಳಗಾವಿಯಲ್ಲೇ ನಡೆಸಲೆಂದು ಚಿಕ್ಕೋಡಿಯಲ್ಲಿ ಪ್ರತಿಭಟಸಿದ ರೈತ ಸಂಘಟನೆ

By

Published : Sep 19, 2019, 9:03 PM IST

ಚಿಕ್ಕೋಡಿ :ವಿಧಾನಮಂಡಲದಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸಬೇಕೆಂದು ಒತ್ತಾಯಿಸಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ರೈತ ಸಂಘಟನೆಗಳು ಪ್ರತಿಭಟನೆ‌ ನಡೆಸಿವೆ.

ಚಳಿಗಾಲ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸಲು ಒತ್ತಾಯಿಸಿ ಚಿಕ್ಕೋಡಿಯಲ್ಲಿ ರೈತರಿಂದ ಪ್ರತಿಭಟನೆ
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ತಲೆ ಕೆಳಗೆ ಹಾಕಿ, ಉರುಳು ಸೇವೆ ಮಾಡಿ, ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ರೈತರು, ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದ್ರು.

'ರೈತರಿಗೆ ಸರ್ಕಾರದಿಂದ ಅನ್ಯಾಯ'

ಸರ್ಕಾರ ಸೂಕ್ತ ರೀತಿಯಲ್ಲಿ ರೈತರಿಗೆ ಬೆಳೆ ಪರಿಹಾರ ನೀಡಿಲ್ಲ, ಪ್ರವಾಹ ಸಂತ್ರಸ್ತರಿಗೆ ನೀಡಲಾಗುವ 10 ಸಾವಿರ ರೂಪಾಯಿಗಳ ಚೆಕ್ ತಲುಪಿಲ್ಲ. ಈ ಭಾಗದ ನೀರಾವರಿ ಯೋಜನೆಗಳನ್ನು ಕೂಡಾ ಜಾರಿ ಮಾಡಿಲ್ಲ. ಜೊತೆಗೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಮನ್ನಾ ಮಾಡಬೇಕೆಂದು ಪ್ರತಿಭಟನಾನಿರತ ರೈತರು ಸರ್ಕಾರವನ್ನು ಒತ್ತಾಯಿಸಿದ್ರು.

ಮುಂದಿನ ತಿಂಗಳು(ಅಕ್ಟೋಬರ್) 14 ರಿಂದ 26 ರವರೆಗೆ ಬೆಂಗಳೂರಿನ ಶಕ್ತಿಸೌಧ ವಿಧಾನಸೌಧದಲ್ಲೇ ಈ ಬಾರಿಯ ಚಳಿಗಾಲದ ಅಧಿವೇಶನ ನಡೆಯಲಿದೆ.

ABOUT THE AUTHOR

...view details