ಬೆಳಗಾವಿ: ತಾಲೂಕಿನ ಹಿಂಡಲಗಾ-ಸುಳಗಾ ರೋಡ್ನಲ್ಲಿರುವ ಅಂಬಿಕಾ ಲಾಡ್ಡ್ & ಬೋರ್ಡಿಂಗ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳನ್ನು ಮಹಿಳಾ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ನಗರದಲ್ಲಿ ಮಹಿಳಾ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಗರದ ಹಿಂಡಲಗಾ - ಸುಳಗಾ ರೋಡನಲ್ಲಿರುವ ಅಂಬಿಕಾ ಲಾಡ್ಡ್ & ಬೋರ್ಡಿಂಗ್ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 4 ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿ ಮೇರೆಗೆ ಬೆಳಗಾವಿ ಮಹಿಳಾ ಪೊಲೀಸ್ ಠಾಣೆಯ ಪಿಐ ಶ್ರೀದೇವಿ ಪಾಟೀಲ ನೇತೃತ್ವದಲ್ಲಿನ ತಂಡದ ಸಿಬ್ಬಂದಿ ಲಾಡ್ಜ್ ಮೇಲೆ ದಾಳಿ ನಡೆಸಿದ್ದಾರೆ.