ಬೆಳಗಾವಿ: ತಡರಾತ್ರಿ ಅಪರಿಚಿತ ಕಿಡಿಗೇಡಿಗಳು ಮನೆಯ ಮುಂದೆ ನಿಲ್ಲಿಸಿರುವ ನಾಲ್ಕು ಬೈಕ್‍ಗಳಿಗೆ ಬೆಂಕಿ ಹಚ್ಚಿ ಪರಾರಿ ಆಗಿರುವ ಘಟನೆ ನೆಹರು ನಗರದಲ್ಲಿ ನಡೆದಿದ್ದು ಬೆಳಗಾವಿಯಲ್ಲಿ ಶಾಂತಿ ಕದಡಲು ಕಿಡಿಗೇಡಿಗಳು ಯತ್ನಿಸಿದ್ದಾರೆ ಎನ್ನಲಾಗಿದೆ.
ಓದಿ:ನಡುರಸ್ತೆಯಲ್ಲೇ ನೂಪುರ್ ಶರ್ಮಾ ಅಣಕು ಪ್ರತಿಕೃತಿ ನೇಣಿಗೆ; ಸುಮೋಟೋ ಕೇಸ್ ದಾಖಲಿಸಿಕೊಂಡ ಬೆಳಗಾವಿ ಪೊಲೀಸರು
ನೆಹರು ನಗರದಲ್ಲಿ ಮನೆಗಳ ಮುಂದೆ ನಿಲ್ಲಿಸಿದ್ದ ನಾಲ್ಕು ಬೈಕ್‍ಗಳಿಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿಯ ನಾಲ್ಕು ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದರು. ಎಪಿಎಂಸಿ ಠಾಣೆ ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕುರಿತು ಎಪಿಎಂಸಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.