ಕರ್ನಾಟಕ

karnataka

ETV Bharat / state

ಡಿಕೆಶಿ ಮನೆ ಮೇಲಿನ ದಾಳಿ ದೊಡ್ಡ ರಾಜಕೀಯ ಷಡ್ಯಂತ್ರ: ಗಜಾನನ ಮಂಗಸೂಳಿ - ಬಿಜೆಪಿ ವಿರುದ್ಧ ಗಜಾನನ ಮಂಗಸೂಳಿ ಆರೋಪ

ಬಿಜೆಪಿಯವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಹೆದರಿ ಅವರ ನಿವಾಸ ಹಾಗೂ ಕಚೇರಿಯ ಮೇಲೆ ಸಿಬಿಐ ದಾಳಿ ನಡೆಸಿದ್ದಾರೆಂದು ಗಜಾನನ ಮಂಗಸೂಳಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

gajanana mangasuli outrage on cbi raid on dks house
ಗಜಾನನ ಮಂಗಸೂಳಿ

By

Published : Oct 5, 2020, 6:24 PM IST

ಅಥಣಿ:ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸ ಹಾಗೂ ಕಚೇರಿಯ ಮೇಲೆ ಸಿಬಿಐ ದಾಳಿ ನಡೆಸಿರುವುದಕ್ಕೆ, ಕಳೆದ ಅಥಣಿ ಉಪ ಚುನಾವಣೆ ಅಭ್ಯರ್ಥಿ ಗಜಾನನ ಮಂಗಸೂಳಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಜಾನನ ಮಂಗಸೂಳಿ
ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿಯನ್ನು ಅಥಣಿ ಕಾಂಗ್ರೆಸ್ ಘಟಕದಿಂದ ಖಂಡಿಸುತ್ತೇವೆ. ರಾಜಕೀಯ ಕೆಲವು ಪ್ರಮುಖ ಘಟ್ಟಗಳಲ್ಲಿ ಡಿ.ಕೆ. ಶಿವಕುಮಾರ್ ಅವರ ಮನೆಯ ಮೇಲೆ ಇಡಿ, ಐಟಿ, ಸಿಬಿಐ ದಾಳಿ ಮಾಡುತ್ತಿರುವುದು ಒಂದಾಗಿದೆ. ಈ ಬೆಳವಣಿಗೆ ಅನೇಕ ಅನುಮಾನಗಳು ಮೂಡಿಸುತ್ತಿವೆ. ಹಾಗೂ ಇಲ್ಲಿ ದೊಡ್ಡ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ ಎಂದು ಹೇಳಿದರು. ಗುಜರಾತ್ ಚುನಾವಣೆ ಸಂದರ್ಭದಲ್ಲಿ ಇದೆ ರೀತಿ ದಾಳಿ ಮಾಡಿದ್ದು, ಸದ್ಯ ಕರ್ನಾಟಕದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ಇರುವ ಸಂದರ್ಭದಲ್ಲಿ ಮತ್ತೆ ಸಿಬಿಐ ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರದವರು ಕೆಲವು ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಚುನಾವಣೆ ಸಂದರ್ಭದಲ್ಲಿ ಈ ರೀತಿ ದಾಳಿಗಳಿಗೆ ಕಾಂಗ್ರೆಸ್ ಹೆದರುವುದಿಲ್ಲ ಎಂದು ಹೇಳಿದರು.

ABOUT THE AUTHOR

...view details