ಚಿಕ್ಕೋಡಿ (ಬೆಳಗಾವಿ): ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಹಾಮಾರಿ ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕ ಗಡಿ ಭಾಗದಲ್ಲಿ ಕಳ್ಳ ಮಾರ್ಗದಿಂದ ನುಸುಳ್ಳಿ ಬಂದರೆ ಅಂತವರ ವಿರುದ್ಧ ಕಠಿಣ ಕಾನೂನು ಶಿಕ್ಷೆಗೊಳಪಡಿಸಲಾಗುವುದು ಎಂದು ಶಾಸಕ ಗಣೇಶ್ ಹುಕ್ಕೇರಿ ಎಚ್ಚರಿಕೆ ನೀಡಿದ್ದಾರೆ.
ಚಿಕ್ಕೋಡಿ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಾಲೂಕಾಡಳಿತದ ಅಧಿಕಾರಿಗಳ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಚಿಕ್ಕೋಡಿ ತಾಲೂಕಿನಲ್ಲಿ ಕೊರೊನಾ ಕಡಿಮೆ ಪ್ರಮಾಣದಲ್ಲಿದೆ. ಆದರೆ, ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿವೆ.