ಬೆಳಗಾವಿ: ಸಮ್ಮಿಶ್ರ ಸರ್ಕಾರ ಪತನಕ್ಕೆ ನಾನು ಕಾರಣ ಎಂದಾದರೆ, ಜೆಡಿಎಸ್ ಶಾಸಕರ ರಾಜೀನಾಮೆ ಕೊಡಿಸಿ ಹೊರ ಕಳುಹಿಸಿದ್ದು ದೇವೆಗೌಡ್ರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ.
ಜೆಡಿಎಸ್ ಶಾಸಕರ ರಾಜೀನಾಮೆ ಕೊಡಿಸಿದ್ದು ದೇವೇಗೌಡ್ರಾ?: ಸಿದ್ದರಾಮಯ್ಯ ವ್ಯಂಗ್ಯ - ಜೆಡಿಎಸ್ ಅನರ್ಹ ಶಾಸಕ
ಸಮ್ಮಿಶ್ರ ಸರ್ಕಾರದ ಪತನಕ್ಕೆ ನಾನೇ ಕಾರಣ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ. ರಾಜ್ಯ ನೆರೆ ಹಾವಳಿಗೆ ಕೇಂದ್ರದಿಂದ ಅನುದಾನ ನೀಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಗೋಕಾಕ್ ತಾಲೂಕಿನಲ್ಲಿ ಇಂದು ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಬೀಳಿಸಲು ನಾನು ಕಾರಣವಲ್ಲ. ಕೆಲವರು ರಾಜಕೀಯ ಪ್ರೇರಿತ ಆರೋಪ ಮಾಡುತ್ತಾರೆ. ಅದಕ್ಕೆ ನಾನು ಹೊಣೆಯಲ್ಲ. ಪ್ರವಾಹ ಪೀಡಿತ ಜನರಿಗೆ ಆದಷ್ಟು ಬೇಗ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಿಹಾರ ನೀಡಬೇಕು ಎಂದರು.
ಇಂದಿರಾ ಕ್ಯಾಂಟೀನ್ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಡಿಸಿಎಂ ಅಶ್ವತ್ ನಾರಾಯಣ್ ಆರೋಪ ಮಾಡಿದ್ದಾರೆ. ಆರೋಪ ತನಿಖೆ ಆಗಲಿ ಅದು ಬಿಟ್ಟು ಇಂದಿರಾ ಕ್ಯಾಂಟಿನ್ ಮುಚ್ಚುವ ಮಾತು ಆಡಬಾರದು. ಸಮ್ಮಿಶ್ರ ಸರ್ಕಾರದಲ್ಲಿ ಈ ಯೋಜನೆಗೆ ಹಣ ಇಟ್ಟಿಲ್ಲ. ಆದರೆ, ಇವರ ಸರ್ಕಾರದಲ್ಲಿ ಹಣ ಇಡುವುದಕ್ಕೆ ಏನು ಸಮಸ್ಯೆ ಎಂದರು.