ಬೆಳಗಾವಿ :ಮಹದಾಯಿ ನದಿ ನೀರು ಹಂಚಿಕೆ ವಿವಾದ ಸಂಬಂಧ ನ್ಯಾಯಾಧೀಕರಣ ಅಂತಿಮ ತೀರ್ಪು ನೀಡಿದ್ರೂ ಸಹ ಗೋವಾ ಸರ್ಕಾರ ಮತ್ತೆ ತಗಾದೆ ತೆಗೆದಿದೆ.
ಮಹದಾಯಿ ನದಿ ನೀರು ಹಂಚಿಕೆ.. ಕರ್ನಾಟಕದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ - ಕರ್ನಾಟಕದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಸಿಎಂ ಸಾವಂತ್
ಮಹಾದಾಯಿ ವಿವಾದ ಈಗಾಗಲೇ ತಾರ್ಕಿಕ ಅಂತ್ಯ ಕಂಡಿದೆ. ಪರಿಸರ ಇಲಾಖೆಯಿಂದ ಯೋಜನೆಗೆ ಅನುಮತಿ ಬೇಕಿಲ್ಲ..
ಕರ್ನಾಟಕ ಸರ್ಕಾರ ಕಾನೂನು ಬಾಹಿರವಾಗಿ ಮಹದಾಯಿ ನೀರು ತಿರುವು ಮಾಡುತ್ತಿದೆ ಎಂದು ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್ ಆರೋಪಿಸಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟಿನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಈ ಸಂಗತಿಯನ್ನು ಟ್ವೀಟ್ ಮಾಡುವ ಮೂಲಕ ತಿಳಿಸಿದ ಸಾವಂತ್, ಮಹದಾಯಿಗಾಗಿ ನಮ್ಮ ಹೋರಾಟ ಮುಂದುವರೆಯುತ್ತೆ ಎಂದು ಅದರಲ್ಲಿ ಉಲ್ಲೇಖಿಸಿದ್ದಾರೆ.
ಈ ಸಂಬಂಧ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಹಾದಾಯಿ ವಿವಾದ ಈಗಾಗಲೇ ತಾರ್ಕಿಕ ಅಂತ್ಯ ಕಂಡಿದೆ. ಪರಿಸರ ಇಲಾಖೆಯಿಂದ ಯೋಜನೆಗೆ ಅನುಮತಿ ಬೇಕಿಲ್ಲ. ಕೇಂದ್ರ ಸರ್ಕಾರದ ಮುಂದೆಯೂ ಗಮನಕ್ಕೆ ತಂದಿದ್ದೇವೆ. ಸ್ಥಳೀಯರ ಭಾವನೆಗಳನ್ನು ಪ್ರಮುಖವಾಗಿಸಿಕೊಂಡು ಗೋವಾ ಸಿಎಂ ನ್ಯಾಯಾಂಗ ನಿಂದನೆ ಕೇಸ್ ಹಾಕಿರಬಹುದು ಎಂಬ ಉತ್ತರ ನೀಡಿದ್ದಾರೆ.